ಕುಶಾಲನಗರ, ಫೆ. 26: ಬೈಚನಹಳ್ಳಿಯ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ಗ್ರಾಮದೇವತೆಯ 11ನೇ ವರ್ಷದ ವಾರ್ಷಿಕೋತ್ಸವ ನಡೆಯಿತು. ಮಾರಿಯಮ್ಮ ದೇವಸ್ಥಾನ ಸಮಿತಿ ಹಾಗೂ ಬೈಚನಹಳ್ಳಿ ಗೆಳೆಯರ ಬಳಗದ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ವೇ.ಬ್ರ. ಹರಿಭಟ್ ನೇತೃತ್ವದಲ್ಲಿ ಉಮೇಶ್ ಮತ್ತು ಅರ್ಚಕರಿಂದ ಮಹಾಗಣಪತಿ ಹೋಮ, ಚಂಡಿಕಾ ಪಾರಾಯಣ, ದುರ್ಗಾಹೋಮ, ಅಭಿಷೇಕ ನಂತರ ಮಹಾಮಂಗಳಾರತಿ ನಡೆಯಿತು.

ಭಕ್ತಾದಿಗಳಿಗೆ ಅನ್ನದಾನ ಹಮ್ಮಿಕೊಳ್ಳಲಾಗಿತ್ತು. ಕುಶಾಲನಗರ ದೇವಾಲಯ ಒಕ್ಕೂಟದ ಪ್ರತಿನಿಧಿಗಳು ತೆರಳಿ ಫಲತಾಂಬೂಲ ಅರ್ಪಿಸಿ ದೇವಿಗೆ ಸಾಮೂಹಿಕ ಪೂಜೆ ಸಲ್ಲಿಸಿದರು.

ಈ ಸಂದರ್ಭ ದೇವಾಲಯ ಸಮಿತಿ ಅಧ್ಯಕ್ಷ ರಾಮದಾಸ್, ಪ್ರಧಾನ ಕಾರ್ಯದರ್ಶಿ ಎಂ.ಎಂ. ಚರಣ್ ಸೇರಿದಂತೆ ಸಮಿತಿಯ ಪ್ರಮುಖರು, ಒಕ್ಕೂಟದ ಪ್ರತಿನಿಧಿಗಳು ಇದ್ದರು.