ಹೆಬ್ಬಾಲೆ, ಫೆ. 27: ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರದಿಂದ ದೇಶದ ಅನ್ನದಾತ ರೈತ ಹಾಗೂ ಕಾರ್ಮಿಕರನ್ನು ಕಡೆಗಣಿಸಲಾಗುತ್ತಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಕೆ. ಮಂಜುನಾಥ್ ಕುಮಾರ್ ಆರೋಪಿಸಿದರು.

ತೊರೆನೂರು ಬಸವೇಶ್ವರ ಸಮುದಾಯ ಭವನದಲ್ಲಿ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಏರ್ಪಡಿಸಿದ್ದ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ದೇಶದ ಆರ್ಥಿಕ ವ್ಯವಸ್ಥೆ ಕುಸಿದಿದೆ. ಜನಸಾಮಾನ್ಯರ ಬದುಕು ದುಸ್ತರವಾಗಿದೆ ಎಂದರು.

ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅನಂತ್‍ಕುಮಾರ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿ ಕಾರ್ಯಕರ್ತರು ಪಕ್ಷದ ಪ್ರತಿನಿಧಿಗಳನ್ನು ಚುನಾಯಿಸಲು ಶ್ರಮವಹಿಸಬೇಕಿದೆ ಎಂದರು.

ಕಾಂಗ್ರೆಸ್ ವಕ್ತಾರ ಟಿ.ಈ. ಸುರೇಶ್ ಮಾತನಾಡಿದರು. ವಲಯ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಟಿ.ಜಿ. ಲೋಕೇಶ್ ಅಧ್ಯಕ್ಷತೆ ವಹಿಸಿದ್ದರು. ಕೆಪಿಸಿಸಿ ಕಾರ್ಮಿಕ ಘಟಕದ ಕಾರ್ಯದರ್ಶಿ ಅಜ್ಜಳ್ಳಿ ರವಿ, ವಿದ್ಯಾರ್ಥಿ ಘಟಕದ ತ್ರಿನೇಶ್, ಬಾವ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಜೆ.ಎಲ್.ಜನಾರ್ಧನ್, ಗ್ರಾ.ಪಂ. ಮಾಜಿ ಅಧ್ಯಕ್ಷ ಟಿ.ಕೆ. ವಸಂತ್, ಬಸವನಹಳ್ಳಿ ಲ್ಯಾಂಪ್ಸ್ ಸೊಸೈಟಿ ಮಾಜಿ ನಿರ್ದೇಶಕ ಉದಯಕುಮಾರ್, ಮುಖಂಡರಾದ ಹೆಬ್ಬಾಲೆ ಮಂಜುನಾಥ್, ಸಿದ್ದಲಿಂಗಪುರ ಕಿಶೋರ್, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ನಿರ್ದೇಶಕ ಟಿ.ಜಿ. ಶ್ರೀನಿವಾಸ್ ಉಪಸ್ಥಿತರಿದ್ದರು. ಇದೇ ಸಂದರ್ಭ ಅಳುವಾರದ ಶಿವಪ್ಪ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.