ಮಡಿಕೇರಿ, ಫೆ. 26: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಅಭ್ಯರ್ಥಿಗಳಿಗೆ ಎಸ್ಸಿಪಿ/ ಟಿಎಸ್ಪಿ ಯೋಜನೆಯಡಿಯಲ್ಲಿ ಐ.ಬಿ.ಪಿ.ಎಸ್. ನಡೆಸುವ ಬ್ಯಾಂಕಿಂಗ್ ಪ್ರೊಬೇಷನರಿ ಆಫೀಸರ್ಸ್ ಮತ್ತು ಕ್ಲರ್ಕ್ ಹುದ್ದೆಗಳ ನೇಮಕಾತಿ ಪರೀಕ್ಷೆಗಳಿಗೆ ನುರಿತ ತರಬೇತಿ ಸಂಸ್ಥೆಗಳ ಮೂಲಕ 240 ಗಂಟೆಗಳ ಪರೀಕ್ಷಾ ಪೂರ್ವ ತರಬೇತಿ ನೀಡಲಾಗುವುದು.
ಈ ತರಬೇತಿ ಪಡೆಯಲು ಇಚ್ಛಿಸುವ ಕನಿಷ್ಟ ಪದವಿ ವಿದ್ಯಾರ್ಹತೆ ಹೊಂದಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಡಿಕೇರಿ, ಕೊಡಗು ಜಿಲ್ಲೆ, ಇಲ್ಲಿ ತಮ್ಮ ಹೆಸರನ್ನು ನೋಂದಾಯಿಸಲು ತಿಳಿಸಿದೆ. ಈ ತರಬೇತಿಯಲ್ಲಿ ಒಟ್ಟು 28 ಪರಿಶಿಷ್ಟ ಜಾತಿ ಹಾಗೂ 22 ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಮಾತ್ರ ಅವಕಾಶವಿದೆ.
ಅಭ್ಯರ್ಥಿಗಳು ಐ.ಬಿ.ಪಿ.ಎಸ್ ಬ್ಯಾಂಕಿಂಗ್ ನೇಮಕಾತಿ ಪರೀಕ್ಷೆಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿಯಲ್ಲಿ ತೇರ್ಗಡೆ ಹೊಂದಿರುವ ಅಭ್ಯರ್ಥಿಗಳು ಅರ್ಹರಾಗಿರುತ್ತಾರೆ. ಕನಿಷ್ಟ 20 ವರ್ಷದಿಂದ ಗರಿಷ್ಠ 33/35 ವರ್ಷ ವಯೋಮಿತಿಯೊಳಗಿರಬೇಕು.
ವೈಯಕ್ತಿಕ ಮಾಹಿತಿ: ಅಭ್ಯರ್ಥಿಗಳು ವಿದ್ಯಾರ್ಹತೆಗೆ ಸಂಬಂಧಿಸಿದ ಪ್ರಮಾಣಪತ್ರಗಳು, ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಹಾಗೂ ಇತರ ವೈಯಕ್ತಿಕ ದಾಖಲೆಗಳನ್ನು ಹಾಜರುಪಡಿಸಬೇಕಾಗಿರುತ್ತದೆ. ಅಭ್ಯರ್ಥಿಯು ತಿತಿತಿ.ಞಚಿushಚಿಟಞಚಿಡಿ.ಛಿom ನಲ್ಲಿ ನೋಂದಾಯಿಸುವುದು ಕಡ್ಡಾಯವಾಗಿದೆ.
ನಿಗದಿತ ಅವಧಿಯೊಳಗೆ ಸ್ವೀಕೃತವಾದ ಅರ್ಜಿಗಳನ್ನು ಪರಿಶೀಲಿಸಿ, ಪದವಿಯಲ್ಲಿ ಪಡೆದ ಶೇಕಡಾವಾರು ಅಂಕಗಳ ಜೇಷ್ಟತೆಯ ಆಧಾರದಲ್ಲಿ ಅರ್ಹ ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಲಾಗುವುದು. ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳು ತರಬೇತಿಯನ್ನು ಮಧ್ಯದಲ್ಲಿ ಬಿಟ್ಟು ಹೋಗುವುದಿಲ್ಲವೆಂದು ಮುಚ್ಛಳಿಕೆ ಪತ್ರವನ್ನು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಗೆ ಸಲ್ಲಿಸುವುದು ಕಡ್ಡಾಯವಾಗಿರುತ್ತದೆ. ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಡಿಕೇರಿ, ಕೊಡಗು ಜಿಲ್ಲೆ ಇಲ್ಲಿನ ದೂರವಾಣಿ: 08272-225851 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಯಮಯಾಧಿಕಾರಿ ಸಿ. ಜಗನ್ನಾಥ್ ತಿಳಿಸಿದ್ದಾರೆ.