ಸೋಮವಾರಪೇಟೆ, ಫೆ. 28: ಇಲ್ಲಿನ ಶ್ರೀ ಆಂಜನೇಯಸ್ವಾಮಿ ದೇವಾಲಯ ಜೀರ್ಣೋದ್ಧಾರ ಸಮಿತಿ ಸಭೆ ದೇವಾಲಯದ ಆವರಣದಲ್ಲಿ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಉಪಸ್ಥಿತಿಯಲ್ಲಿ ನಡೆಯಿತು.
ದೇವಾಲಯ ನಿರ್ಮಾಣ ಕಾರ್ಯಕ್ಕೆ ಈಗಾಗಲೇ ಚಾಲನೆ ನೀಡಲಾಗಿದ್ದು, ಸಮಿತಿಯ ಪದಾಧಿಕಾರಿಗಳು ಹೆಚ್ಚಿನ ಜವಾಬ್ದಾರಿಯೊಂದಿಗೆ ದೇವಾಲಯ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು. ದೇವಾಲಯಕ್ಕೆ ಭಕ್ತಾದಿಗಳ ಸಂಖ್ಯೆ ಹೆಚ್ಚಿಸಬೇಕು. ಸರ್ವರ ಸಹಕಾರದಿಂದ ದೇವಸ್ಥಾನ ನಿರ್ಮಾಣವಾಗಬೇಕು ಎಂದು ರಂಜನ್ ಅಭಿಪ್ರಾಯಿಸಿದರು.
ಶ್ರೀ ಆಂಜನೇಯ ಸ್ವಾಮಿ ದೇವಾಲಯ ಜೀರ್ಣೋದ್ಧಾರ ಸಮಿತಿಯ ಹೆಸರಿನಲ್ಲಿ ರಾಷ್ಟ್ರೀಕೃತ ಬ್ಯಾಂಕ್‍ನಲ್ಲಿ ಖಾತೆ ತೆರೆಯುವ ಮೂಲಕ ಸಾರ್ವಜನಿಕ ಭಕ್ತಾದಿಗಳಿಂದ ದೇಣಿಗೆ ಸಂಗ್ರಹಿಸಬೇಕು. ಸರ್ಕಾರದಿಂದ ಈಗಾಗಲೇ ರೂ. 5 ಲಕ್ಷ ಅನುದಾನ ಬಿಡುಗಡೆಯಾಗಿದೆ. ದೇವಾಲಯ ಸಮಿತಿಗೆ ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರುಗಳನ್ನು ನೇಮಿಸಿಕೊಳ್ಳುವತ್ತ ಸಮಿತಿ ಗಮನಹರಿಸಬೇಕು ಎಂದು ಶಾಸಕರು ಸಲಹೆ ನೀಡಿದರು.
ಸಭೆಯಲ್ಲಿ ದೇವಾಲಯ ಜೀರ್ಣೋದ್ಧಾರ ಸಮಿತಿ ಹಾಗೂ ದೇವಾಲಯ ಸಮಿತಿಯ ಪ್ರಮುಖರಾದ ಸೀತಾರಾಮ್, ಅಭಿಮನ್ಯುಕುಮಾರ್, ಜಯರಾಂ, ಜಿ.ಎ. ಉದಯ, ಬನ್ನಳ್ಳಿ ಗೋಪಾಲ್, ಸುನಿಲ್, ಬಿ.ಎಸ್. ಶ್ರೀಧರ್, ಎ.ಎಸ್. ಮಲ್ಲೇಶ್, ಚಂದ್ರಹಾಸ್ ಭಟ್, ಡಾ. ಶೆಟ್ಟಿ, ಪ್ರಸಾದ್ ಭಟ್, ಮನುಕುಮಾರ್ ರೈ, ಕಿಬ್ಬೆಟ್ಟ ಮಧು ಸೇರಿದಂತೆ ಇತರರು ಉಪಸ್ಥಿತರಿದ್ದರು.