ಮಡಿಕೇರಿ, ಫೆ. 29: ದ್ವಿತೀಯ ಪಿಯುಸಿ ಪರೀಕ್ಷೆ ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ ಈಗಾಗಲೇ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಆದರೆ ಮದೆನಾಡಿನ ಮದೆಮಹೇಶ್ವರ ಕಾಲೇಜು ಬಳಿ ಕೆಎಸ್‍ಆರ್‍ಟಿಸಿ ಬಸ್ ನಿಲುಗಡೆಗೊಳ್ಳುತ್ತಿಲ್ಲವೆಂದು ಕಾಲೇಜ್‍ನ ಪ್ರಾಂಶುಪಾಲೆ ತೆಕ್ಕಡೆ ಗುಲಾಬಿ ಜನಾರ್ಧನ ಜಿಲ್ಲಾಧಿಕಾರಿಗಳ ಗಮನ ಸೆಳೆದಿದ್ದಾರೆ.

ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಅನುಕೂಲವಾಗುವಂತೆ ಮಡಿಕೇರಿ, ಸಂಪಾಜೆ ಮಾರ್ಗದಲ್ಲಿ ಸಂಚರಿಸುವ ಕೆಎಸ್‍ಆರ್‍ಟಿಸಿ ಎಕ್ಸ್‍ಪ್ರೆಸ್ ಬಸ್‍ಗಳ ನಿಲುಗಡೆಗೆ ಕ್ರಮ ಕೈಗೊಳ್ಳಬೇಕೆಂದು ಅವರು ಮನವಿ ಮಾಡಿದ್ದಾರೆ.