ಮಡಿಕೇರಿ, ಜ.28: ಭತ್ತ ಖರೀದಿ ಸಂಬಂಧಿಸಿದಂತೆ ಈಗಾಗಲೇ ಜಿಲ್ಲೆಯ ಮೂರು ಕೃಷಿ ಉತ್ಪನ್ನ ಮಾರುಕಟ್ಟೆ ಕೇಂದ್ರಗಳಲ್ಲಿ ಒಟ್ಟು 530 ಮಂದಿ ಕೃಷಿಕರು ಹೆಸರು ನೋಂದಾಯಿಸಿಕೊಂಡಿದ್ದಾರೆ ಎಂದು ಆಹಾರ ಇಲಾಖೆ ಉಪ ನಿರ್ದೇಶಕರಾದ ಗೌರವ್ ಕುಮಾರ್ ಶೆಟ್ಟಿ ತಿಳಿಸಿದ್ದಾರೆ.

ಗೋಣಿಕೊಪ್ಪ ಕೃಷಿ ಉತ್ಪನ್ನ ಮಾರುಕಟ್ಟೆ ಕೇಂದ್ರದಲ್ಲಿ 153 ಮಂದಿ, ಕುಶಾಲನಗರ ಕೃಷಿ ಉತ್ಪನ್ನ ಮಾರುಕಟ್ಟೆ ಕೇಂದ್ರದಲ್ಲಿ 350 ಮಂದಿ ಮತ್ತು ಮಡಿಕೇರಿ ಕೃಷಿ ಉತ್ಪನ್ನ ಮಾರುಕಟ್ಟೆ ಕೇಂದ್ರದಲ್ಲಿ 27 ಮಂದಿ ಹೆಸರು ನೋಂದಾಯಿಸಿಕೊಂಡಿದ್ದು, ಭತ್ತ ಗಿರಣಿಗಳಲ್ಲಿ ಭತ್ತ ಖರೀದಿ ಮಾಡಲಾಗುತ್ತಿದೆ ಎಂದು ಆಹಾರ ಇಲಾಖೆ ಉಪ ನಿರ್ದೇಶಕ ಗೌರವ್ ಕುಮಾರ್ ಶೆಟ್ಟಿ ತಿಳಿಸಿದ್ದಾರೆ. ಬೆಳೆ ಸಮೀಕ್ಷೆ ಸಂದರ್ಭ ಭತ್ತ ಬೆಳೆ ಕೈಬಿಟ್ಟು ಹೋಗಿರುವ ಬಗ್ಗೆ ಆಕ್ಷೇಪಣೆ ಸಂಬಂಧಿಸಿದಂತೆ ಮೇಲ್ವಿಚಾರಕರು ಪರಿಶೀಲನೆ ಕಾರ್ಯ ಕೈಗೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.