ಕರಿಕೆ, ಫೆ. 28: ಇಲ್ಲಿನ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಾರ್ಚ್ ಒಂದರಿಂದ ಸಂಪೂರ್ಣ ಪ್ಲಾಸ್ಟಿಕ್ ನಿಷೇಧ ಜಾರಿಗೆ ತರಲು ಗ್ರಾಮ ಪಂಚಾಯಿತಿ ತೀರ್ಮಾನ ತೆಗೆದುಕೊಂಡಿದೆ. ಪಂಚಾಯಿತಿ ಸಭಾಂಗಣದಲ್ಲಿ ಪಂಚಾಯಿತಿ ಅಧ್ಯಕ್ಷ ಬಾಲಚಂದ್ರ ನಾಯರ್ ಅಧ್ಯಕ್ಷತೆಯಲ್ಲಿ ನಡೆದ ಗ್ರಾಮದ ವರ್ತಕರು ಹಾಗೂ ಸಂಘ-ಸಂಸ್ಥೆಗಳ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು. ಇದಲ್ಲದೆ ಗ್ರಾ.ಪಂ. ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದನ್ನು ನಿಷೇಧಿಸಲು ತೀರ್ಮಾನ ಕೈಗೊಳ್ಳಲಾಯಿತು.

ಸಭೆಯಲ್ಲಿ ಅಭಿವೃದ್ಧಿ ಅಧಿಕಾರಿ ಬಿಪಿನ್, ಪ್ಲಾಸ್ಟಿಕ್ ನಿಷೇಧ ಕುರಿತು ಮಾಹಿತಿ ನೀಡಿದರು. ಉಪಾಧ್ಯಕ್ಷೆ ಸೋಲಿ ಜಾರ್ಜ್, ಸದಸ್ಯರು ಅಂಗಡಿ ಮಾಲೀಕರು ಉಪಸ್ಥಿತರಿದ್ದರು. ಕಾರ್ಯದರ್ಶಿ ಗಣಪತಿ ವಂದಿಸಿದರು.