ಮಡಿಕೇರಿ, ಜ.28 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪೊಲೀಸ್ ಇಲಾಖೆ, ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಹಾಗೂ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಇವರ ಸಂಯುಕ್ತ ಆಶ್ರಯದಲ್ಲಿ ಮಾರ್ಚ್ 1 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ಕಾರ್ಮಿಕ ಸಮ್ಮಾನ ದಿನಾಚರಣೆ ನಡೆಯಲಿದೆ.