ಸಿದ್ದಾಪುರ, ಫೆ. 29: ಚೆಟ್ಟಳ್ಳಿ, ವಾಲ್ನೂರು-ತ್ಯಾಗತ್ತೂರು ಹಾಗೂ ನೆಲ್ಲಿಹುದಿಕೇರಿಯ ಗ್ರಾ.ಪಂ. ವ್ಯಾಪ್ತಿಗೆ ಒಳಪಡುವ ವಿವಿಧ ರಸ್ತೆ ಕಾಮಗಾರಿಗಳಿಗೆ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಭೂಮಿಪೂಜೆ ನೆರವೇರಿಸಿದರು.

ಚೆಟ್ಟಳ್ಳಿಯ ರೂ. 48 ಲಕ್ಷ, ನೆಲ್ಲಿಹುದಿಕೇರಿಯಲ್ಲಿ ರೂ. 61 ಲಕ್ಷ ಹಾಗೂ ವಾಲ್ನೂರು-ತ್ಯಾಗತ್ತೂರಿನಲ್ಲಿ ರೂ. 35 ಲಕ್ಷ ವೆಚ್ಚದಲ್ಲಿ ವಿವಿಧ ರಸ್ತೆ ಕಾಮಗಾರಿಗಳಿಗೆ ಭೂಮಿಪೂಜೆಯನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಈಗಾಗಲೇ ಮಡಿಕೇರಿ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ರಸ್ತೆ ಸೇರಿದಂತೆ ಹಲವು ಕಾಮಗಾರಿಗಳು ಪ್ರಗತಿಯಲ್ಲಿದ್ದು ಮುಂದಿನ ದಿನಗಳಲ್ಲಿ ಗ್ರಾ.ಪಂ. ವ್ಯಾಪ್ತಿಯ ಎಲ್ಲಾ ಮೂಲಭೂತ ಸೌಕರ್ಯಗಳಿಗೆ ಶ್ರಮಿಸುವುದಾಗಿ ತಿಳಿಸಿದರು. ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಬೇಕೆಂದು ಹಾಗೂ ಈ ಬಗ್ಗೆ ಗ್ರಾಮಸ್ಥರು ಕೂಡ ಗುಣಮಟ್ಟವನ್ನು ಪರಿಶೀಲನೆ ನಡೆಸಬೇಕೆಂದು ತಿಳಿಸಿದರು.

ಈ ಸಂದರ್ಭ ವಾಲ್ನೂರು-ತ್ಯಾಗತ್ತೂರು ಗ್ರಾ.ಪಂ. ಅಧ್ಯಕ್ಷೆ ನಾಗರತ್ನಮ್ಮ, ಚೆಟ್ಟಳ್ಳಿ ಗ್ರಾ.ಪಂ. ಅಧ್ಯಕ್ಷೆ ವತ್ಸಲ, ನೆಲ್ಲಿಹುದಿಕೇರಿ ಗ್ರಾ.ಪಂ. ಅಧ್ಯಕ್ಷೆ ಪದ್ಮಾವತಿ ಹಾಗೂ ಗ್ರಾ.ಪಂ. ಸದಸ್ಯರು, ವಾಲ್ನೂರು, ನೆಲ್ಲಿಹುದಿಕೇರಿ ಗ್ರಾ.ಪಂ. ಪಿ.ಡಿ.ಓ. ಅನಿಲ್‍ಕುಮಾರ್ ಹಾಜರಿದ್ದರು.