ವೀರಾಜಪೇಟೆ, ಫೆ. 28: ಕ್ರೀಡಾಕೂಟಗಳಿಂದ ಸಮಾಜದಲ್ಲಿ ಸಾಮರಸ್ಯ ಬೆಳೆಯುವುದರೊಂದಿಗೆ ವಿದ್ಯಾರ್ಥಿಗಳು ಸಮಾಜಕ್ಕೆ ಉತ್ತಮ ಕೊಡುಗೆ ನೀಡುವುದಲ್ಲದೆ ಭಾಂದವ್ಯ ಮೂಡಲು ಸಹಕಾರಿಯಾಗುತ್ತದೆ ಎಂದು ಸಂತ ಅನ್ನಮ್ಮ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕÀ ರೆ.ಫಾ. ಮದಲೈಮುತ್ತು ಅಭಿಪ್ರಾಯಪಟ್ಟರು.
ಸಂತ ಅನ್ನಮ್ಮ ಪದವಿ ಕಾಲೇಜಿನಲ್ಲಿ ನಡೆದ ರಾಜ್ಯಮಟ್ಟದ ಬಾಸ್ಕೆಟ್ ಬಾಲ್ ಪಂದ್ಯಾವಳಿಯ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ಕ್ರೀಡಾಕೂಟಗಳು ವಿದ್ಯಾರ್ಥಿ ಜೀವನದಲ್ಲಿ ಮುಖ್ಯವಾದದ್ದು, ಸಮಾಜದಲ್ಲಿ ಶಾಂತಿ, ಸಹಬಾಳ್ವೆ, ಅಭಿವೃದ್ಧಿಗೆ ಕ್ರೀಡೆ ಸಹಕಾರಿಯಾಗಿದೆ ಎಂದರು.
ಮುಖ್ಯ ಅತಿಥಿಗಳಾದ ವೀರಾಜಪೇಟೆಯ ವಕೀಲ ರತ್ನಾಕರ ಶೆಟ್ಟಿ, ಉದ್ಯಮಿ ಬೋಪಣ್ಣ, ದಾನಿ ರಜತ್ ಶೇಟ್ ಹಾಗೂ ಸಂತ ಅನ್ನಮ್ಮ ಪದವಿ ಕಾಲೇಜಿನ ಪ್ರಾಂಶುಪಾಲ ರೆ. ಫಾ. ರೋನಿ ರವಿಕುಮಾರ್, ದೈಹಿಕ ಶಿಕ್ಷಣ ನಿರ್ದೇಶಕÀ ಹಾಗೂ ಆಯೋಜಕ ಬಿ.ವಿ. ರಾಜ ರೈ ಉಪಸ್ಥಿತರಿದ್ದರು.
ಬಾಸ್ಕೆಟ್ ಬಾಲ್ ಪಂದ್ಯಾವಳಿಯಲ್ಲಿ 12 ತಂಡಗಳು ಪಾಲ್ಗೊಂಡಿದ್ದವು. ಮೈಸೂರಿನ ಮೈಕಾ ಕಾಲೇಜಿನ ತಂಡವು ವಿಜೇತರಾಗಿ ಟ್ರೋಫಿಯನ್ನು ತನ್ನದಾಗಿಸಿತು. ವೀರಾಜಪೇಟೆಯ ಸಂತ ಅನ್ನಮ್ಮ ತಂಡವು ರನ್ನರ್ಸ್ ಟ್ರೋಫಿಯನ್ನು ತನ್ನದಾಗಿಸಿದರು.
ಪಂದ್ಯಾವಳಿಯಲ್ಲಿ ರೆಫ್ರಿಗಳಾಗಿ ಮೈಸೂರಿನ ಆನಂದ್, ಕುಮಾರ್, ದೈಹಿಕ ಶಿಕ್ಷಣ ನಿರ್ದೇಶಕÀ ಬಿ.ವಿ. ರಾಜ ರೈ ಕಾರ್ಯನಿರ್ವಹಿಸಿದರು.