ಕುಶಾಲನಗರ, ಫೆ. 29: ಕುಶಾಲನಗರ ಸರಕಾರಿ ಪ್ರಥಮ ದರ್ಜೆ ಕಾಲೇಜಿನ 2019-20ನೇ ಸಾಲಿನ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ವಿತರಣೆ ಕಾರ್ಯಕ್ರಮ ನಡೆಯಿತು.

ಮಡಿಕೇರಿ ಕ್ಷೇತ್ರ ಶಾಸಕ ಅಪ್ಪಚ್ಚುರಂಜನ್ ಕಾರ್ಯಕ್ರಮ ಉದ್ಘಾಟಿಸಿದರು. ವಿದ್ಯಾರ್ಥಿಗಳಿಗೆ ಸಾಂಕೇತಿಕವಾಗಿ ಲ್ಯಾಪ್ ಟಾಪ್ ವಿತರಣೆ ಮಾಡಿದ ನಂತರ ಮಾತನಾಡಿದ ಅಪ್ಪಚ್ಚು ರಂಜನ್, ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಸರಕಾರ ಹಲವು ಕಾರ್ಯಕ್ರಮಗಳನ್ನು ನಿರಂತರವಾಗಿ ಹಮ್ಮಿಕೊಂಡು ಬರುತ್ತಿದೆ. ಪದವಿ ವಿದ್ಯಾರ್ಥಿಗಳು ಲ್ಯಾಪ್‍ಟಾಪ್ ಸದ್ಬಳಕೆ ಮಾಡಿಕೊಂಡು ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದುವುದರೊಂದಿಗೆ ಅವುಗಳನ್ನು ಜೋಪಾನ ಮಾಡಬೇಕದೆ ಎಂದು ಹೇಳಿದರು.

ಕಾಲೇಜು ಪ್ರಾಂಶುಪಾಲ ಪೆÇ್ರ. ಹೆಚ್.ಬಿ. ಲಿಂಗಮೂರ್ತಿ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಪಂ ಸದಸ್ಯ ಬಿ. ಅಮೃತ್‍ರಾಜ್, ರೂಪಾ ಉಮಾಶಂಕರ್, ಜಯವರ್ಧನ, ಬಿಜೆಪಿ ಪ್ರಮುಖರಾದ ವಿ.ಎನ್. ವಸಂತಕುಮಾರ್ ವಿ.ಡಿ. ಪುಂಡರೀಕಾಕ್ಷ, ಕುಮಾರಪ್ಪ, ಭರತ್ ಮಾಚಯ್ಯ, ವೈಶಾಖ್, ನವನೀತ್ ಸೇರಿದಂತೆ ಕಾಲೇಜು ಉಪನ್ಯಾಸಕ ವೃಂದ, ವಿದ್ಯಾರ್ಥಿಗಳು ಇದ್ದರು.