ನಾಪೆÇೀಕ್ಲು, ಫೆ. 28: ನಾಪೆÇೀಕ್ಲು ಗ್ರಾಮ ಪಂಚಾಯಿತಿಗೆ ಒಳಪಟ್ಟ ಹಳೇ ತಾಲೂಕುವಿನಲ್ಲಿ ಸುಮಾರು ರೂ. 8 ಲಕ್ಷ ವೆಚ್ಚದಲ್ಲಿ 2018-19ನೇ ಸಾಲಿನ ಜಿ.ಎನ್.ಆರ್.ಇ.ಜಿ.ಎ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಅನುದಾನದಿಂದ ನಿರ್ಮಿಸಲಾದ ನೂತನ ಅಂಗನವಾಡಿ ಕಟ್ಟಡಕ್ಕೆ ಸ್ಥಳವನ್ನು ದಾನವಾಗಿ ನೀಡಿದ ಕುಲ್ಲೇಟಿರ ಮಾದಪ್ಪ ಹಾಗೂ ಚಿಣ್ಣವ್ವ ದಂಪತಿಯನ್ನು ಸನ್ಮಾನಿಸಲಾಯಿತು.
ಈ ಸಂದರ್ಭ ವಿಧಾನ ಪರಿಷತ್ ಸದಸ್ಯೆ ಶಾಂತೆಯಂಡ ವೀಣಾ ಅಚ್ಚಯ್ಯ, ಜಿಲ್ಲಾ ಪಂಚಾಯಿತಿ ಸದಸ್ಯ ಪಾಡಿಯಮ್ಮಂಡ ಮುರಳಿ ಕರುಂಬಮ್ಮಯ್ಯ, ತಾಲೂಕು ಪಂಚಾಯಿತಿ ಅಧ್ಯಕ್ಷೆ ತೆಕ್ಕಡೆ ಶೋಭಾ ಮೋಹನ್, ನಾಪೆÇೀಕ್ಲು ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ಎ. ಇಸ್ಮಾಯಿಲ್, ತಾಲೂಕು ಆರ್.ಎಂ.ಸಿ. ಅಧ್ಯಕ್ಷ ಶಿವಚಾಳಿಯಂಡ ಅಂಬಿ ಕಾರ್ಯಪ್ಪ, ತಾ.ಪಂ. ಸದಸ್ಯೆ ಕೋಡಿಯಂಡ ಇಂದಿರಾ ಹರೀಶ್, ಗ್ರಾ.ಪಂ. ಉಪಾಧ್ಯಕ್ಷ ಕಾಳೆಯಂಡ ಸಾಬಾ ತಿಮ್ಮಯ್ಯ, ಎಲ್ಲಾ ಸದಸ್ಯರು, ಮಡಿಕೇರಿ ತಾಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲಕ್ಷ್ಮೀ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಶೀಲಾ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಚೋಂದಕ್ಕಿ, ಗ್ರಾ.ಪಂ. ಸಿಬ್ಬಂದಿಗಳು ಇದ್ದರು.