ಮಡಿಕೇರಿ, ಫೆ. 28: ಸೇವಾಭಾರತಿ ಕೊಡಗು ಜಿಲ್ಲಾ ಘಟಕದಿಂದ ಮಾರ್ಚ್ 7 ರಂದು ಮಧ್ಯಾಹ್ನ 2 ಗಂಟೆಗೆ ಇಲ್ಲಿನ ಭಾರತೀಯ ವಿದ್ಯಾಭವನದಲ್ಲಿ ಸ್ನೇಹಮಿಲನ ಏರ್ಪಡಿಸಲಾಗಿದೆ. ಸಂಘಟನೆಯ ರಾಜ್ಯ ಕಾರ್ಯದರ್ಶಿ ಡಾ. ಚಂದ್ರಶೇಖರ್ ಮಾರ್ಗದರ್ಶನ ನೀಡಲಿದ್ದಾರೆ ಎಂದು ಜಿಲ್ಲಾಧ್ಯಕ್ಷ ಟಿ.ಸಿ. ಚಂದ್ರನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.