ಶನಿವಾರಸಂತೆ, ಫೆ. 28: ಪಟ್ಟಣದ ಬ್ರೈಟ್ ಅಕಾಡೆಮಿ ಹೇಮಾ ವಿದ್ಯಾಸಂಸ್ಥೆಯಲ್ಲಿ ಅಂತರ ಶಾಲಾ ರಸಪ್ರಶ್ನೆ ಸ್ಪರ್ಧಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.

ಸ್ಪರ್ಧೆಯಲ್ಲಿ ಹೇಮಾ ವಿದ್ಯಾಸಂಸ್ಥೆ ವಿದ್ಯಾರ್ಥಿಗಳು ಪ್ರಥಮ, ಬಾಪೂಜಿ ವಿದ್ಯಾಸಂಸ್ಥೆ ವಿದ್ಯಾರ್ಥಿಗಳು ದ್ವಿತೀಯ ಹಾಗೂ ತ್ಯಾಗರಾಜ ಕಾಲೋನಿಯ ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ತೃತೀಯ ಸ್ಥಾನ ಗಳಿಸಿದರು.

ವಿಜೇತ ವಿದ್ಯಾರ್ಥಿಗಳಿಗೆ ಪ್ರಶಸ್ತಿಪತ್ರ ಹಾಗೂ ಬಹುಮಾನ ವಿತರಿಸಲಾಯಿತು. ತೀರ್ಪುಗಾರರಾಗಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಗೀತಾ ನಿವೃತ್ತ ಸೈನಿಕರ ಸಂಘದ ಅಧ್ಯಕ್ಷ ಎಂ.ಎನ್. ಧರ್ಮಪ್ಪ, ರಾಜ್ಯಪ್ರಶಸ್ತಿ ವಿಜೇತ ಶಿಕ್ಷಕ ಸಿ.ಎಸ್. ಸತೀಶ್ ಪಾಲ್ಗೊಂಡಿದ್ದರು. ಪ್ರಾಂಶುಪಾಲ ಲಾಂಛನ್ ಕಾರೇಕರ್ ಕಾರ್ಯಕ್ರಮ ನಿರ್ವಹಿಸಿದರು. ಅಕಾಡೆಮಿ ಅಧ್ಯಕ್ಷ ಪರಮೇಶ್, ಕಾರ್ಯದರ್ಶಿ ರುಕ್ಮಿಣಿ ಹಾಜರಿದ್ದರು.