ಕೂಡಿಗೆ, ಫೆ. 28: ಮೈಸೂರಿನ ನಾರಾಯಣ ಮಲ್ಟಿ ಸ್ಪೆಷಾಲಿಟ್ ಆಸ್ಪತ್ರೆಯ ಸಿ.ಎಸ್.ಆರ್. ತಂಡ, ಕಾರಿತಾಸ್ ಇಂಡಿಯಾ ನವದೆಹಲಿ, ಓಡಿಪಿ ಸಂಸ್ಥೆ ಮೈಸೂರು ಹಾಗೂ ಮುಳ್ಳುಸೋಗೆ ಗ್ರಾಮ ಪಂಚಾಯಿತಿ ಇವರ ಸಹಯೋಗದಲ್ಲಿ ಮುಳ್ಳುಸೋಗೆ ಜನತಾ ಕಾಲೋನಿಯಲ್ಲಿರುವ ಅಂಬೇಡ್ಕರ್ ಭವನದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಕ್ಯಾನ್ಸರ್ ಕುರಿತು ಜಾಗೃತಿ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಮುಳ್ಳುಸೋಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭವ್ಯ ನೆರವೇರಿಸಿ ಮಾತನಾಡಿ, ಸಾರ್ವಜನಿಕರು, ಗ್ರಾಮಸ್ಥರು, ವಿವಿಧ ಸಂಘ-ಸಂಸ್ಥೆಗಳ ಮೂಲಕ ನಡೆಸುವÀ ಉಚಿತ ಆರೋಗ್ಯ ತಪಾಸಣೆಯ ಸದುಪಯೋಗ ಪಡೆದುಕೊಳ್ಳಬೇಕೆಂದರು. ಅಭಿಯಾನದ ಒಂದು ಭಾಗವಾಗಿ ಉಚಿತ ಅರೋಗ್ಯ ತಪಾಸಣೆ ಮೂಲಕ ರಕ್ತದೊತ್ತಡ, ಸಕ್ಕರೆ ಕಾಯಿಲೆ ಇಸಿಜಿ ಸೇರಿದಂತೆ ವಿವಿಧ ತಪಾಸಣೆಗಳನ್ನು ಸ್ಥಳೀಯ ಗ್ರಾಮಸ್ಥರಿಗೆ ಮಾಡಲಾಯಿತು. ಇದರ ಸದುಪಯೋಗವನ್ನು 90 ಜನ ಪಡೆದರು. ಓಡಿಪಿ ಸಂಸ್ಥೆಯ ವತಿಯಿಂದ ಕ್ಯಾನ್ಸರ್ ಕುರಿತು ಅರಿವು, ಮಹಿಳಾ ದೌರ್ಜನ್ಯ ತಡೆ ಕಾಯ್ದೆ ವಿವಿಧ ಇಲಾಖೆಯ ವತಿಯಿಂದ ಸಿಗುವ ಎಲ್ಲಾ ರೀತಿಯ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಲಾಯಿತು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಜಶೇಖರ, ಸಂಸ್ಥೆಯ ಸಂಯೋಜಕಿ ಯಮುನಾ, ತರಬೇತಿ ಸಂಯೋಜಕಿ ಜಾಯ್ ಮಿನೇಜನ್, ಬ್ರೋಹಿಣಿ ಮಮತಾ ಹಾಗೂ ಮಹಿಳೋದಯ ಒಕ್ಕೂಟದ ಸದಸ್ಯರು ಹಾಜರಿದ್ದರು.