ಮಡಿಕೇರಿ, ಫೆ, 28: ಮರೆನಾಡು ಗ್ರಾಮಗಳ ವ್ಯಾಪ್ತಿಯನ್ನು ಒಳಗೊಂಡಿರುವ ಮರೆನಾಡು ಕೊಡವ ಸಮಾಜದ ವಾರ್ಷಿಕ ಮಹಾಸಭೆ ಮಾ. 2 ರಂದು ಬೆಳಿಗ್ಗೆ 10.30ಕ್ಕೆ ನಡೆಯಲಿದೆ. ಸಮಾಜದ ಅಧ್ಯಕ್ಷ ಮಲ್ಲೇಂಗಡ ಎಂ. ಪೆಮ್ಮಯ್ಯ ಅವರ ಅಧ್ಯಕ್ಷತೆಯಲ್ಲಿ ಬಿರುನಾಣಿ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ಸಭೆ ನಡೆಯಲಿರುವದಾಗಿ ಕಾರ್ಯದರ್ಶಿ ಮಲ್ಲೇಂಗಡ ಧನಂಜಯ ತಿಳಿಸಿದ್ದಾರೆ.