ಶನಿವಾರಸಂತೆ, ಫೆ. 28: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಹಾಗೂ ಸಮೀಪದ ಆಲೂರು ಸಿದ್ದಾಪುರ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸಹಭಾಗಿತ್ವದಲ್ಲಿ ಮೊರಾರ್ಜಿ ದೇಸಾಯಿ ಜಯಂತಿ ಹಾಗೂ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ತಾ. 29 ರಂದು (ಇಂದು) ಬೆಳಿಗ್ಗೆ 10.30ಕ್ಕೆ ನಡೆಯಲಿದೆ. ಸಮಾರಂಭದ ಅಧ್ಯಕ್ಷತೆಯನ್ನು ಪ್ರಾಂಶುಪಾಲೆ ಕೆ.ಎನ್. ಭಾರತಿ ವಹಿಸುತ್ತಾರೆ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಭಿವೃದ್ಧಿ ಇಲಾಖೆ ನಿವೃತ್ತ ವ್ಯವಸ್ಥಾಪಕ ಪುಟ್ಟರಾಜ್, ಶಿಕ್ಷಕ ಡಿ.ಪಿ.ಸತೀಶ್, ವಿ.ಅಲೋಕ್, ಟಿ.ಎಲ್. ಲೋಲಾಕ್ಷಿ ಹಾಗೂ ದಾನಿಗಳಾದ 14 ಮಂದಿ ಪೋಷಕರನ್ನು ಸನ್ನಾನಿಸಿ ಗೌರವಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.