ಮಡಿಕೇರಿ, ಫೆ. 28: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಮಾ. 7 ಮತ್ತು 8 ರಂದು ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ 35ನೇ ಪತ್ರಕರ್ತರ ರಾಜ್ಯ ಸಮ್ಮೇಳನ ನಡೆಯಲಿದೆ. ಸಮ್ಮೇಳನದಲ್ಲಿ ತಾ. 8 ರಂದು ಮಧ್ಯಾಹ್ನ 12.30 ಗಂಟೆಗೆ ನಡೆಯಲಿರುವ ಗ್ರಾಮೀಣ ಪತ್ರಿಕೋದ್ಯಮ ಸವಾಲು ಎಂಬ ವಿಷಯಾಧಾರಿತ ವಿಚಾರಗೋಷ್ಠಿಯಲ್ಲಿ ಶಕ್ತಿ ಪತ್ರಿಕೆ ಪ್ರಧಾನ ಸಂಪಾದಕ ಜಿ. ರಾಜೇಂದ್ರ ಅವರು ವಿಷಯ ಪ್ರಸ್ತಾವನೆ ಮಾಡಲಿದ್ದಾರೆ.