ಮಡಿಕೇರಿ, ಮಾ.1: ಜಿಲ್ಲಾ ಕೇಂದ್ರ ಗ್ರಂಥಾಲಯ, ಮಡಿಕೇರಿ, ಕೊಡಗು ಜಿಲ್ಲೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶಾಖಾ ಗ್ರಂಥಾಲಯಗಳಿಂದ 2018-19ನೇ ಸಾಲಿನಲ್ಲಿ ಸಂಗ್ರಹವಾಗಿರುವ ಹಳೆಯ ದಿನಪತ್ರಿಕೆ ಮತ್ತು ನಿಯತಕಾಲಿಕೆಗಳನ್ನು ವಿಲೇವಾರಿ ಮಾಡುವ ಕುರಿತು ಅರ್ಹ ಕೊಟೇಷನ್‍ದಾರರಿಂದ ದರಪಟ್ಟಿಯನ್ನು ಆಹ್ವಾನಿಸಲಾಗಿದೆ.

ಆಸಕ್ತಿಯುಳ್ಳ ಕೊಟೇಷನ್‍ದಾರರು ದರಪಟ್ಟಿಯನ್ನು ಮೊಹರು ಮಾಡಿ ಮುಖ್ಯ ಗ್ರಂಥಾಲಯಾಧಿಕಾರಿಗಳ ಕಚೇರಿ, ಜಿಲ್ಲಾ ಕೇಂದ್ರ ಗ್ರಂಥಾಲಯ, ಮಡಿಕೇರಿ ಇವರಿಗೆ ತಾ. 10 ರಂದು ಸಂಜೆ 4 ಗಂಟೆಯೊಳಗೆ ತಲುಪುವಂತೆ ಕಳುಹಿಸತಕ್ಕದ್ದು. ಹೆಚ್ಚಿನ ಮಾಹಿತಿಗೆ ಕಚೇರಿ ದೂರವಾಣಿ ಸಂಖ್ಯೆ 08272-225463 ಹಾಗೂ ಮುಖ್ಯ ಗ್ರಂಥಾಲಯಾಧಿಕಾರಿಗಳ ಕಚೇರಿ, ಜಿಲ್ಲಾ ಕೇಂದ್ರ ಗ್ರಂಥಾಲಯ, ಮಡಿಕೇರಿ ಇವರನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು.