ಮಡಿಕೇರಿ,ಮಾ. 1: ಕಾಲೇಜು ಶಿಕ್ಷಣ ಇಲಾಖೆ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇವರ ಸಂಯುಕ್ತಾಶ್ರಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ವೃತ್ತಿ ಮತ್ತು ಉದ್ಯೋಗ ಕೋಶದ ವತಿಯಿಂದ ಲೀಡ್ ಬ್ಯಾಂಕ್ ವ್ಯವಸ್ಥಾಪಕ ಆರ್.ಕೆ.ಬಾಲಚಂದ್ರ ಅವರಿಂದ ನಾಯಕತ್ವ ಮತ್ತು ತಂಡದ ನಿರ್ವಹಣೆ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ನಡೆಯಿತು.

ನಾಯಕತ್ವದ ಗುಣಗಳ ಬಗ್ಗೆ ಆರ್.ಕೆ.ಬಾಲಚಂದ್ರ ಮಾತನಾಡಿ ಒಬ್ಬ ನಾಯಕನಿಗೆ ಸಮಯ ಪ್ರಜ್ಞೆ ಜೀವನದ ಪ್ರಮುಖವಾದ ಅಂಶವಾಗಿದೆ. ಸಮಯವನ್ನು ಸರಿಯಾಗಿ ಸದ್ಭಳಕೆ ಮಾಡಿಕೊಳ್ಳುವ ಚತುರತೆ ಇರಬೇಕು. ಎಂದರು.

ರಾಷ್ಟ್ರಪೀತ ಮಹಾತ್ಮ ಗಾಂಧೀಜಿ ಅವರ ಆದರ್ಶ ಹಾಗೂ ನಾಯಕತ್ವ ಗುಣಗಳು ಇಂದಿಗೂ ಮಾದರಿಯಾಗಿದೆ. ಅದನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ವೈ.ಚಿತ್ರಾ ಅಧ್ಯಕ್ಷತೆ ವಹಿಸಿದ್ದರು ಹಾಗೂ ಪ್ರಾಧ್ಯಾಪಕರಾದ ನಿರ್ಮಲ ಮತ್ತು ರಾಘವೇಂದ್ರ ಪ್ರಸಾದ್ ನಿರೂಪಿಸಿದರು.