ಗುಡ್ಡೆಹೊಸೂರು, ಮಾ. 3: ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಇವರ ವತಿಯಿಂದ ಗುಡ್ಡೆಹೊಸೂರು ಶಾಲೆಯಲ್ಲಿ ನಾಟಕ ಪ್ರದರ್ಶನ ನಡೆಯಿತು. ಬಾಲ್ಯವಸ್ಥೆಯ ಹಾಗೂ ಕಿಶೋರಾವಸ್ಥೆಯ ಕಾರ್ಮಿಕರ ಪದ್ಧತಿಯು ಮಕ್ಕಳನ್ನು ದೈಹಿಕವಾಗಿ, ನೈತಿಕವಾಗಿ, ಮಾನಸಿಕವಾಗಿ ಹಾಗೂ ಆರ್ಥಿಕವಾಗಿ ಶೋಷಣೆಗೆ ಅವರ ಶಿಕ್ಷಣದ ಹಾಗೂ ಸರ್ವಾಂಗೀಣ ಪ್ರಗತಿಯ ಅವಕಾಶಗಳನ್ನು ಬಗ್ಗೆ ನಾಟಕದಲ್ಲಿ ತಿಳಿಸಲಾಯಿತು. ನಾಟಕವನ್ನು ರಾಜು ಮತ್ತು ತಂಡದವರು ನಡೆಸಿದರು. ಈ ಸಂದರ್ಭ ಕಾರ್ಮಿಕ ಇಲಾಖೆಯ ಕೊಡಗು ಜಿಲ್ಲಾ ನಿರ್ದೇಶಕ ಆರ್. ಶೀಕಾರತ್ ಆಹ್ಮದ್, ಶಾಲಾ ಮುಖ್ಯ ಶಿಕ್ಷಕರು, ಸಹಶಿಕ್ಷಕ ವೃಂದ ಮತ್ತು ಮಕ್ಕಳು ಭಾಗವಹಿಸಿದ್ದರು.