ಮಡಿಕೇರಿ, ಮಾ.3: ಪ್ರಸಕ್ತ(2019-20) ಸಾಲಿನಲ್ಲಿ ಸಮನ್ವಯ ಶಿಕ್ಷಣ ಚಟುವಟಿಕೆಗಳ ಯಶಸ್ವಿ ಅನುಷ್ಠಾನಕ್ಕಾಗಿ ಕ್ಷೇತ್ರ ಸಂಪನ್ಮೂಲ ಕೇಂದ್ರಗಳಲ್ಲಿ ಖಾಲಿಯಿರುವ 5 ಪ್ರೌಢಶಾಲಾ ವಿಭಾಗದ ವಿಶೇಷ ಸಂಪನ್ಮೂಲ ಶಿಕ್ಷಕರ ಹುದ್ದೆಗೆ ನೇರಗುತ್ತಿಗೆ ಮೂಲಕ ಶಿಕ್ಷಕರನ್ನು ನೇಮಕಾತಿ ಮಾಡಲು ವಿಶೇಷ ಬಿಇಡಿ ವಿದ್ಯಾರ್ಹತೆ ಹೊಂದಿ ಆರ್‍ಸಿಐ ನಲ್ಲಿ ನೊಂದಣಿ ಮಾಡಿಕೊಂಡಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ತಾ. 5 ರಂದು ಮಧ್ಯಾಹ್ನ 1.30 ಗಂಟೆಯೊಳಗೆ ಅರ್ಜಿ ಸಲ್ಲಿಸುವಂತೆ ಸಮಗ್ರ ಶಿಕ್ಷಣ ಕರ್ನಾಟಕ ಪದನಿಮಿತ್ತ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿಗಳು ಹಾಗೂ ಉಪ ನಿರ್ದೇಶಕ ಪಿ.ಎಸ್.ಮಚ್ಚಾಡೊ ತಿಳಿಸಿದ್ದಾರೆ.