ಸೋಮವಾರಪೇಟೆ, ಮಾ. 3: ಇಲ್ಲಿನ ಕೆವಿಬಿ ಫ್ರೆಂಡ್ಸ್ ಕ್ಲಬ್ ಆಶ್ರಯದಲ್ಲಿ ಏಪ್ರಿಲ್ 16 ರಿಂದ ಸ್ಥಳೀಯ ಸರ್ಕಾರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಕೊಡಗು ಪ್ರಿಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟ ಆಯೋಜಿಸಲಾಗಿದೆ ಎಂದು ಕ್ಲಬ್‍ನ ಅಧ್ಯಕ್ಷ ಸುಮಂತ್ ತಿಳಿಸಿದ್ದಾರೆ.

ಕೆಪಿಎಲ್ ಮಾದರಿಯಲ್ಲಿ ಪಂದ್ಯಾಟ ಆಯೋಜಿಸಲಾಗುತ್ತಿದ್ದು, ಪ್ರಥಮ ಸ್ಥಾನ ಪಡೆಯುವ ತಂಡಕ್ಕೆ ರೂ. 50 ಸಾವಿರ ನಗದು, ದ್ವಿತೀಯ ಸ್ಥಾನ ಪಡೆಯುವ ತಂಡಕ್ಕೆ ರೂ. 25 ಸಾವಿರ ನಗದು ಹಾಗೂ ಟ್ರೋಫಿಗಳನ್ನು ನೀಡಲಾಗುವದು ಎಂದರು. ಕೊಡಗು ಜಿಲ್ಲೆಯ ಕ್ರೀಡಾಪಟುಗಳಿಗೆ ಮಾತ್ರ ಪಂದ್ಯಾಟದಲ್ಲಿ ಭಾಗವಹಿಸಲು ಅವಕಾಶವಿದ್ದು, ಆಸಕ್ತ ಆಟಗಾರರು 9483078868, 9880490536 ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.