ಮಡಿಕೇರಿ, ಮಾ.3 :ಪ್ರಸಕ್ತ(2019-20) ಸಾಲಿನ ವಾಣಿಜ್ಯ ಮತ್ತು ನಿರ್ವಹಣಾ ಶಾಸ್ತ್ರ ವಿಭಾಗದ ವತಿಯಿಂದ ತಾ. 4 ರಂದು (ಇಂದು) ವೀರಾಜಪೇಟೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಚಿಕ್ಕಪೇಟೆಯ ವಾಣಿಜ್ಯ ವಿಭಾಗದ ಕಟ್ಟಡದಲ್ಲಿ ಒಂದು ದಿನದ ರಾಜ್ಯ ಮಟ್ಟದ ಲುಮಿನೆನ್ಸ್(ನಾಬಾ 2020 (ಐumiಟಿಚಿಟಿಛಿe(ಓಚಿbhಚಿ 2020) ಹಬ್ಬ ನಡೆಯಲಿದೆ.

ಕಾರ್ಯಕ್ರಮದಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ವೀರಾಜಪೇಟೆ ಬ್ರಾಂಚ್ ಮ್ಯಾನೇಜರ್ ಆನಂದನ್ ಆರ್.ಗುರುಸ್ವಾಮಿ ಉದ್ಘಾಟಿಸಲಿದ್ದಾರೆ. ಕಾಲೇಜಿನ ಪ್ರಾಂಶುಪಾಲ ಡಾ.ಟಿ.ಕೆ.ಬೋಪಯ್ಯ, ಕಾರ್ಯಕ್ರಮ ಸಂಯೋಜಕ ನಿರ್ವಹಣಾ ಶಾಸ್ತ್ರ ವಿಭಾಗದ ಮುಖ್ಯಸ್ಥರು ಹಾಗೂ ಸಹಾಯಕ ಪ್ರಾಧ್ಯಾಪಕ ಮಂಜುನಾಥ್ ಆರ್, ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ವೇಣುಗೋಪಾಲ್ ಎಚ್.ಎಸ್, ಸಹಾಯಕ ಪ್ರಾಧ್ಯಾಪಕರಾದ ಸುನಿತ ಎಂ.ಎಂ., ಗುರುಪ್ರಸಾದ್ ಎನ್. ಇತರರು ಪಾಲ್ಗೊಳ್ಳಲಿದ್ದಾರೆ.

ಈ ಕಾರ್ಯಕ್ರಮಕ್ಕೆ ಕೊಡಗು ಜಿಲ್ಲೆ ಸೇರಿದಂತೆ ನೆರೆಯ ಜಿಲ್ಲೆಗಳ ಸುಮಾರು 16 ಕಾಲೇಜುಗಳ ವಿದ್ಯಾರ್ಥಿಗಳ ತಂಡಗಳು ಭಾಗವಹಿಸಲಿವೆ. ಕಾರ್ಯಕ್ರಮದಲ್ಲಿ ಕಾಲೇಜಿನ ಭೋದಕ-ಭೋದಕೇತರ ವೃಂದದವರು, ವಿದ್ಯಾರ್ಥಿಗಳು, ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿ ಗಳು ಮತ್ತು ಪೋಷಕರು, ಇತರರು ಪಾಲ್ಗೊಳ್ಳಲಿದ್ದಾರೆ.