ಕುಶಾಲನಗರ, ಮಾ. 3: ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಕೊಪ್ಪ ಸೆಸ್ಕ್ ಕಚೇರಿ ಕಾರ್ಯವೈಖರಿ ವಿರೋಧಿಸಿ ರಸ್ತೆ ತಡೆ, ಪ್ರತಿಭಟನೆ ನಡೆಯಿತು.

ಪಿರಿಯಾಪಟ್ಟಣ ತಾಲೂಕು ಕೊಪ್ಪ ಗ್ರಾಮದ ಸೆಸ್ಕ್ ಅಧಿಕಾರಿ, ಸಿಬ್ಬಂದಿಗಳು ವಿದ್ಯುತ್ ಮಾರ್ಗಗಳ ಸಮರ್ಪಕ ನಿರ್ವಹಣೆ ಮಾಡುವಲ್ಲಿ ವಿಫಲರಾಗಿದ್ದಾರೆ. ಗ್ರಾಹಕರಿಗೆ ಸರಿ ಯಾಗಿ ಸೇವೆ ಸಲ್ಲಿಸುವಲ್ಲಿ ಅಧಿ ಕಾರಿಗಳು ನಿರ್ಲಕ್ಷ್ಯ ಧೋರಣೆ ತಾಳುತ್ತಿ ದ್ದಾರೆ.

ಬೆಳೆಗಳಿಗೆ ನೀರೊದಗಿಸಲು ಪಂಪ್‍ಸೆಟ್‍ಗಳಿಗೆ ವಿದ್ಯುತ್ ಅಭಾವ ತಲೆದೋರಿದ್ದು ಈ ಬಗ್ಗೆ ತಕ್ಷಣ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಪಿರಿಯಾಪಟ್ಟಣ ತಾಲೂಕು ಅಧ್ಯಕ್ಷ ಧನರಾಜ್ ಮತ್ತು ಕಾರ್ಯಕರ್ತರು ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿದರು. ಕೊಪ್ಪ ಗ್ರಾಮದ ಹೆದ್ದಾರಿ ರಸ್ತೆಯಲ್ಲಿ ಕುಳಿತು ಅಧಿಕಾರಿಗಳ ವಿರುದ್ಧ ಪ್ರತಿಭಟಿಸಿದರು.