ಕರಿಕೆ, ಮಾ. 3: ಮಾರಕ ಕೊರೊನ ವೈರಸ್ ಸೋಂಕಿತ ವ್ಯಕ್ತಿ ಕರ್ನಾಟಕದ ಬೆಂಗಳೂರಿನಲ್ಲಿ ಪತ್ತೆಯಾದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಹೈ ಅಲರ್ಟ್ ಘೋಷಣೆಯಾಗಿದ್ದು, ಕೊಡಗಿನ ಗಡಿಗ್ರಾಮ ಕರಿಕೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಇಂದಿನಿಂದ ಕಟ್ಟೆಚ್ಚರ ವಹಿಸಲಾಗಿದೆ.
ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿ ಆರೋಗ್ಯ ಸಹಾಯಕಿಯರು ಹಾಗೂ ಆಶಾಕಾರ್ಯಕರ್ತೆಯರು ಗ್ರಾಮಕ್ಕೆ ಬರುವ ಹಾಗೂ ಹೊರಹೋಗುವ ವಾಹನಗಳಿಗೆ ಮಾಹಿತಿ ಕರಪತ್ರ ವಿತರಿಸುತ್ತಿದ್ದಾರೆ. ರೋಗ ಲಕ್ಷಣ, ಇತರ ಸಂಶಯಾಸ್ಪದ ಪ್ರಕರಣಗಳು ಕಂಡುಬಂದಲ್ಲಿ ಆರೋಗ್ಯ ಇಲಾಖೆಗೆ ಮಾಹಿತಿ ನೀಡುವಂತೆ ವೈದ್ಯಾಧಿಕಾರಿ ಡಾ. ಪುಂಡಲಿ ಕೃಷ್ಣ ಮನವಿ ಮಾಡಿದ್ದಾರೆ.