ಮಡಿಕೇರಿ, ಮಾ.3: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಉಚಿತವಾಗಿ ಕಂಪ್ಯೂಟರ್ ತರಬೇತಿಯು ಮಾರ್ಚ್ 5 ರಿಂದ ನಡೆಯಲಿದೆ.
ಈ ತರಬೇತಿಯಲ್ಲಿ ಕಂಪ್ಯೂಟರ್ ಬೇಸಿಕ್ಸ್ , ಕನ್ನಡ ನುಡಿ ಹಾಗೂ ಟ್ಯಾಲಿ ವಿಷಯಗಳ ಕುರಿತು ತರಬೇತಿ ನೀಡಲಾಗುವುದು. ಕನಿಷ್ಟ ದ್ವಿತೀಯ ಪಿಯುಸಿ ಹಾಗೂ 18-35 ವರ್ಷಗಳ ವಯೋಮಿತಿಯೊಳಗಿರುವ ಅಭ್ಯರ್ಥಿಗಳು ತರಬೇತಿಯಲ್ಲಿ ಭಾಗವಹಿಸಬಹುದಾಗಿದೆ. ತರಬೇತಿಯಲ್ಲಿ ಒಟ್ಟು 30 ಅಭ್ಯರ್ಥಿಗಳಿಗೆ ಮಾತ್ರ ಅವಕಾಶವಿದೆ.
ತರಬೇತಿ ಪಡೆಯಲಿಚ್ಚಿಸುವ ಅಭ್ಯರ್ಥಿಗಳು ನಗರದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಹೆಸರು ವಿದ್ಯಾರ್ಹತೆಗೆ ಸಂಬಂಧಿಸಿದಂತೆ ಅಂಕಪಟ್ಟಿ, ಮೀಸಲಾತಿ ಪ್ರಮಾಣ ಪತ್ರ ಹಾಗೂ ಆಧಾರ್ ಕಾರ್ಡ್, ಗುರುತಿನ ಚೀಟಿಯ ನಕಲು ಪ್ರತಿಗಳನ್ನು ಹಾಜರುಪಡಿಸಿ ನೋಂದಾಯಿಸಿಕೊಳ್ಳಬಹುದು. ಮೊದಲು ತರಬೇತಿಗೆ ನೋಂದಾಯಿಸಿದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಹೆಚ್ಚಿನ ಮಾಹಿತಿಗೆ ಕಚೇರಿಯ ದೂ. 08272-225851ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿ ಸಿ.ಜಗನ್ನಾಥ್ ತಿಳಿಸಿದ್ದಾರೆ.