ನಾಪೆÉÇೀಕ್ಲು, ಮಾ. 3: ನಾಪೆÇೀಕ್ಲು ವ್ಯಾಪ್ತಿಯಲ್ಲಿ ಪ್ರತಿನಿತ್ಯ ವಿದ್ಯುತ್ ಸಮಸ್ಯೆ ಉಂಟಾಗುತ್ತಿದ್ದು, ವಿದ್ಯಾರ್ಥಿಗಳು ಪರದಾಡುವ ಪರಿಸ್ಥಿತಿ ಎದುರಾಗಿದೆ. ಇದರಿಂದ ಆಕ್ರೋಶಗೊಂಡ ಸಾರ್ವಜನಿಕರು, ಪೆÇೀಷಕರು ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಈ ಬಗ್ಗೆ ಸಾರ್ವಜನಿಕರ ಪರವಾಗಿ ‘ಶಕ್ತಿ’ಗೆ ಹೇಳಿಕೆ ನೀಡಿದ ನಾಪೆÇೀಕ್ಲು ಗ್ರಾ.ಪಂ. ಮಾಜಿ ಅಧ್ಯಕ್ಷ ಕುಲ್ಲೇಟಿರ ಅರುಣ್ ಬೇಬ, ಇದು ವಿದ್ಯಾರ್ಥಿಗಳ ಪರೀಕ್ಷೆ ಸಮಯವಾಗಿದೆ. ವಿದ್ಯಾರ್ಥಿಗಳು ತಮ್ಮ ಕನಸನ್ನು ಸಾಕಾರಗೊಳಿಸಲು ಹಗಲು ರಾತ್ರಿ ಶ್ರಮಿಸುತ್ತಿದ್ದಾರೆ.

ಈ ಸಂದರ್ಭದಲ್ಲಿ ವಿದ್ಯುತ್ ಕಡಿತಗೊಳ್ಳುವದರಿಂದ ವಿದ್ಯಾರ್ಥಿಗಳಿಗೆ ಹೆಚ್ಚಿನ ಸಮಸ್ಯೆಯಾಗಿದೆ. ಸಂಬಂಧಿಸಿದವರು ಈ ಬಗ್ಗೆ ಕೂಡಲೇ ಕ್ರಮಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ನಾಪೆÇೀಕ್ಲು ಆಟೋ ಚಾಲಕರ ಮತ್ತು ಮಾಲೀಕರ ಸಂಘ, ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಪ್ರತಿಭಟನೆ ನಡೆಸಲಾಗುವದೆಂದು ತಿಳಿಸಿದ್ದಾರೆ.