ಮಡಿಕೇರಿ, ಮಾ. 6: ಫೆ. 28 ರಿಂದ ತಾ.1ರವರೆಗೆ ಧಾರವಾಡದಲ್ಲಿ ನಡೆದ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಮಿಲನ ಕೆ ಭರತ್ ಒಡಿಸ್ಸಿ, ಕೂಚಿಪುಡಿ ಶಾಸ್ತ್ರೀಯ ನೃತ್ಯ ಪ್ರ್ರಾಕಾರಗಳಲ್ಲಿ ಸತತ ಐದನೇ ವರ್ಷವೂ ಪ್ರಥಮ ಬಹುಮಾನ ಪಡೆದಿರುತ್ತಾರೆ .ಇವರು ಭಾಗಮಂಡಲ ನಿವಾಸಿಯಾಗಿದ್ದು ಪ್ರಸ್ತುತ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೀನುಗಾರಿಕೆ ಇಲಾಖೆಯಲ್ಲಿ ಸಹಾಯಕ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.