ಮಡಿಕೇರಿ, ಮಾ. 6: ಅಂತರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿಶೇಷ ಮಹಿಳಾ ಗ್ರಾಮ ಸಭೆಯನ್ನು ತಾ. 7 ರಂದು (ಇಂದು) ಪೂರ್ವಾಹ್ನ 11 ಗಂಟೆಗೆ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಗ್ರಾ.ಪಂ. ಅಧ್ಯಕ್ಷ ಕೊಲ್ಲೀರ ಎಂ. ಗೋಪಿಚಿಣ್ಣಪ್ಪ ಅವರ ನೇತೃತ್ವದಲ್ಲಿ ನಡೆಸಲಾಗುವುದು. ಸಾರ್ವಜನಿಕರು ಸಭೆಗೆ ಹಾಜರಾಗಿ ಮಹಿಳೆಯರಿಗೆ ಇರುವ ಸೌಲಭ್ಯಗಳ ಮಾಹಿತಿಯನ್ನು ಪಡೆದು ಸಲಹೆ ಸೂಚನೆಗಳನ್ನು ನೀಡುವ ಮೂಲಕ ಮಹಿಳಾ ಗ್ರಾಮ ಸಭೆಯನ್ನು ಯಶಸ್ವಿಗೊಳಿಸಿ ಕೊಡಬೇಕೆಂದು ಗ್ರಾಮ ಪಂಚಾಯಿತಿ ಪ್ರಕಟಣೆಯಲ್ಲಿ ತಿಳಿಸಿದೆ.