ಸಿದ್ದಾಪುರ, ಮಾ. 6: ಚೆಟ್ಟಳ್ಳಿ ಭಾಗದ ಈರೆಳೆಒಳಮುಡಿ, ಮೋದೂರು, ಹೊರೂರು, ಚೇರಳಶ್ರೀಮಂಗಲ, ಚೆಟ್ಟಳ್ಳಿ ಕಡಗದಾಳು ವ್ಯಾಪ್ತಿಯಲ್ಲಿರುವ ಕಾಫಿ ತೋಟಗಳಲ್ಲಿ ಬೀಡುಬಿಟ್ಟಿರುವ ಕಾಡಾನೆಗಳನ್ನು ಮಾ.8 ರಂದು ಕಾರ್ಯಾಚರಣೆ ನಡೆಸಿ ಅರಣ್ಯಕ್ಕೆ ಅಟ್ಟಲಾಗುವುದೆಂದು ಕುಶಾಲನಗರ ಉಪವಲಯ ಅರಣ್ಯಾಧಿಕಾರಿ ಸುಬ್ರಾಯ ತಿಳಿಸಿದ್ದಾರೆ. ತಾ.8ರಂದು ಬೆಳಿಗ್ಗೆ 9 ಗಂಟೆಯಿಂದ ಅರಣ್ಯ ಸಿಬ್ಬಂದಿಗಳು ಕಾಫಿ ತೋಟಗಳಲ್ಲಿ ಬೀಡುಬಿಟ್ಟಿರುವ ಕಾಡಾನೆಗಳನ್ನು ಕಾರ್ಯಾಚರಣೆ ನಡೆಸಿ ಅರಣ್ಯಕ್ಕೆ ಅಟ್ಟಲಿದ್ದು ಈ ಹಿನ್ನೆಲೆಯಲ್ಲಿ ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ ಕಾರ್ಯಾಚರಣೆ ನಡೆಯಲಿದೆ. ಚೆಟ್ಟಳ್ಳಿ ಹಾಗೂ ಸುತ್ತಮುತ್ತಲಿನ ಭಾಗದ ಗ್ರಾಮಸ್ಥರು ಹಾಗೂ ಕಾರ್ಮಿಕರು ಮತ್ತು ಸಾರ್ವಜನಿಕರು ಶಾಲಾ ಮಕ್ಕಳು ಎಚ್ಚರವಹಿಸಬೇಕೆಂದು ಅರಣ್ಯ ಇಲಾಖಾ ಅಧಿಕಾರಿ ಸುಬ್ರಾಯ ತಿಳಿಸಿದ್ದಾರೆ.