ಬೆಂಗಳೂರು, ಮಾ. 5: ನಾಡಿನ ಬೆನ್ನೆಲು ಬಾಗಿರುವ ರೈತರ ಸಂಕಷ್ಟಗಳ ಪರಿಹಾರಕ್ಕೆ ಪೂರಕವಾಗಿ ಕೃಷಿಗೆ ಮೊದಲ ಆದ್ಯತೆ ಯೊಂದಿಗೆ ಹೊಸ ಕೃಷಿ ನೀತಿ, ಸಂಚಾರಿ ಕೃಷಿ ಹೆಲ್ತ್ ಕ್ಲಿನಿಕ್, ಮಹಾದಾಯಿ, ಎತ್ತಿನಹೊಳೆ ಯೋಜನೆ, ನೂತನ ಕೈಗಾರಿಕಾ ನೀತಿ, ಪ್ರವಾಸೋದ್ಯಮ ಅಭಿವೃದ್ಧಿಗೆ ಹೊಸ ಪ್ರವಾಸೋದ್ಯಮ ನೀತಿ, ಪ್ರವಾಸೋದ್ಯಮ ಟಾಸ್ಕ್ ಫೋರ್ಸ್, ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಗ್ರಾಮೀಣ ಸುಮಾರ್ಗ ಯೋಜನೆ, ನಿರುದ್ಯೋಗಿಗಳಿಗೆ ಉಪಕಾರ ಯೋಜನೆ, ಐತಿಹಾಸಿಕ ಸ್ಮಾರಕಗಳ ರಕ್ಷಣೆಗೆ ಸಂರಕ್ಷಣಾ ಯೋಜನೆ, ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಪ್ರಥಮ ಬಾರಿಗೆ ಮಕ್ಕಳ ಬಜೆಟ್, ಪೊಲೀಸರಿಗೆ ಗೃಹಭಾಗ್ಯ ಯೋಜನೆ ಸೇರಿದಂತೆ ಹಲವಾರು ಯೋಜನೆಗಳ ನಡುವೆ ತೈಲ ಬೆಲೆ ಏರಿಕೆಯೊಂದಿಗೆ ಗ್ರಾಹಕರಿಗೆ ಬಿಸಿ ಮುಟ್ಟಿಸಿದ್ದಲ್ಲದೆ, ಮದ್ಯದ ಮೇಲಿನ ತೆರಿಗೆ ಏರಿಸಿ ಮದ್ಯಪ್ರಿಯರ ಕಿಕ್ ಇಳಿಸುವ ಯೋಜನೆಗಳ 2020-21ನೇ ಸಾಲಿನ ಆಯ-ವ್ಯಯವನ್ನು ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವಿಧಾನಸಭೆಯಲ್ಲಿಂದು ಮಂಡಿಸಿದರು.ಹಸಿರು ಶಾಲು ಹೊದ್ದು, ಕೃಷಿಕರ ಬಗೆಗಿನ ನಾಣ್ಣುಡಿಗಳನ್ನು ಉಲ್ಲೇಖಿಸುತ್ತಾ, ಹಕಣಕಾಸು ಮಂತ್ರಿಯೂ ಆಗಿರುವ ಯಡಿಯೂರಪ್ಪ ಅವರು ಒಟ್ಟು 20 ಲಕ್ಷದ 37 ಸಾವಿರ ಕೋಟಿ ಗಾತ್ರದ 118 ಪುಟಗಳನ್ನೊಳಗೊಂಡ ತಮ್ಮ ಏಳನೇ ಆಯ-ವ್ಯಯ ಮಂಡನೆ ಮಾಡಿದರು. ಈ ಬಾರಿ ಇಲಾಖಾವಾರು ಅನುದಾನ ಒದಗಿಸದೆ 6 ವಲಯಗಳನ್ನಾಗಿ ವಿಂಗಡಿಸಿ, ವಲಯವಾರು ಯೋಜನೆ ರೂಪಿಸಿ ಅನುದಾನ ಒದಗಿಸಲಾಗಿದೆ.ಕೃಷಿ ಯೋಜನೆಗಳು: ನೀರಿನ ಭದ್ರತೆ, ಭೂ ಸಂಚಯ ಮತ್ತು ಸಾಮೂಹಿಕ ಕೃಷಿ, ಕೃಷಿ ಉತ್ಪನ್ನಗಳ ಸಂಸ್ಕರಣೆ, ಮಾರುಕಟ್ಟೆಗೆ ಉತ್ತೇಜನ ನೀಡಲು ಮತ್ತು ಕೃಷಿ ಹಾಗೂ ತೋಟಗಾರಿಕೆಯನ್ನು ಉದ್ದಿಮೆಯಾಗಿ ಪರಿಗಣಿಸಲು ಹೊಸ ಕೃಷಿ ನೀತಿ ಅನುಷ್ಠಾನ.

‘ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ’ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ರೂ. 4000 ಹೆಚ್ಚುವರಿ ನೆರವು ನೀಡುವ ಯೋಜನೆಯನ್ನು ಮುಂದುವರೆಸಲು ರೂ. 2600 ಕೋಟಿ ಅನುದಾನ.

ಎಲ್ಲಾ ರೈತರಿಗೆ ಹಾಗೂ ಮೀನುಗಾರರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ಸೌಲಭ್ಯ. ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯ ರಾಜ್ಯದ ವಿಮಾ ಕಂತಿನ ಪಾಲು ಬಿಡುಗಡೆಗೆ ರೂ. 900 ಕೋಟಿ ರೈತ ಸಿರಿ ಯೋಜನೆಯಡಿ ಟೆಫ್, ಚಿಯಾ ಮತ್ತು ಕ್ವಿನೋವಾ ಸಿರಿಧಾನ್ಯಗಳ ಸೇರ್ಪಡೆ.

ಮಣ್ಣು, ನೀರು ಪರೀಕ್ಷೆ ಮತ್ತು ರೈತರಿಗೆ ತಾಂತ್ರಿಕ ನೆರವು ನೀಡಲು ‘ಸಂಚಾರಿ ಕೃಷಿ ಹೆಲ್ತ್ ಕ್ಲಿನಿಕ್’ ಪ್ರಾರಂಭ ಮಾಡುವುದಾಗಿ ಘೋಷಣೆ ಮಾಡಿದರು. ಸಾವಯವ ಕೃಷಿ ಪ್ರೋತ್ಸಾಹಕ್ಕೆ ರೂ. 200 ಕೋಟಿ ಅನುದಾನ.

ರೈತರಿಗೆ ಪ್ರದೇಶವಾರು ಸೂಕ್ತ ಬೆಳೆಯನ್ನು ಬೆಳೆಯಲು, ಅಗತ್ಯ ಬೀಜಗಳು, ರಸಗೊಬ್ಬರಗಳು, ಸಣ್ಣ ಪೌಷ್ಟಿಕಾಂಶಗಳ ಬಳಕೆಗೆ ಮಾರ್ಗದರ್ಶನ ನೀಡಲು ಹೊಸ ನೀತಿ ರಚನೆ.

ವಿಶ್ವಬ್ಯಾಂಕ್ ಪ್ರಾಯೋಜಿತ ಸುಜಲಾ ಯೋಜನೆಯನ್ನು ಜಾರಿಗೊಳಿಸಿರುವ 12 ಮಳೆ ಆಶ್ರಿತ ಜಿಲ್ಲೆಗಳ 2500 ಗ್ರಾಮಗಳ ಒಂದು ಲಕ್ಷಕ್ಕೂ ಹೆಚ್ಚು ರೈತರಿಗೆ ಭೂ ಸಂಪನ್ಮೂಲ ಯಾದಿಯ ತರಬೇತಿ ನೀಡಿ, ಕಾರ್ಡ್ ವಿತರಿಸಲು ರೂ. 10 ಕೋಟಿ ಅನುದಾನ.

‘ಎತ್ತಿನಹೊಳೆ ಯೋಜನೆ’ಗೆ ರೂ. 1500 ಕೋಟಿ ಅನುದಾನ; ಮೊದಲನೆಯ ಹಂತದ ಕಾಮಗಾರಿಗಳನ್ನು ಪೂರ್ಣಗೊಳಿಸಿ ಮುಂದಿನ ಮುಂಗಾರು ಹಂಗಾಮಿನಲ್ಲಿ ಪ್ರಾಯೋಗಿಕವಾಗಿ ಚಾಲನೆಗೊಳಿಸಲು ಕ್ರಮ.

ರಾಜ್ಯದಲ್ಲಿ ಪಶುಸಂಗೋಪನಾ ಆರ್ಥಿಕ ಚಟುವಟಿಕೆಗಳ ವಿಸ್ತರಣೆಗೆ ಸಮೀಕ್ಷೆ ನಡೆಸಿ, ಸಮಗ್ರ ನೀತಿ ರಚನೆ.

ವಿದೇಶಿ ತಳಿಯ ಹಂದಿಗಳನ್ನು ಆಮದು ಮಾಡಿಕೊಳ್ಳುವ “ಸಮಗ್ರ ವರಾಹ ಅಭಿವೃದ್ಧಿ” ಯೋಜನೆಗೆ ಐದು ಕೋಟಿ ರೂ. ಅನುದಾನ.

ಆಧುನಿಕ ಮೀನುಗಾರಿಕೆ ತಾಂತ್ರಿಕತೆ ಅಳವಡಿಕೆಯ ಉತ್ತೇಜನಕ್ಕೆ 1.5 ಕೋಟಿ ರೂ. ವೆಚ್ಚದಲ್ಲಿ ‘ಕರ್ನಾಟಕ ಮತ್ಸ್ಯ ವಿಕಾಸ ಯೋಜನೆ’ ಜಾರಿ.

‘ಮಹಿಳಾ ಮೀನುಗಾರರ ಸಬಲೀಕರಣ’ ಯೋಜನೆಯಡಿ 1000 ಮೀನುಗಾರ ಮಹಿಳೆಯರಿಗೆ ದ್ವಿಚಕ್ರ ವಾಹನಗಳನ್ನು ನೀಡಲು ಐದು ಕೋಟಿ ರೂ. ಅನುದಾನ ಒದಗಿಸಲಾಗಿದೆ.

(ಮೊದಲ ಪುಟದಿಂದ) ಆಡಳಿತ ಸುಧಾರಣೆ: ಸರ್ಕಾರದ ಎಲ್ಲಾ ಸೇವೆಗಳನ್ನು ಒಂದೇ ಸೂರಿನಡಿ ತರಲು ಖಾಸಗಿ ಸಹಭಾಗಿತ್ವದೊಂದಿಗೆ ಪ್ರತಿ ಗ್ರಾಮದಲ್ಲಿ ಗ್ರಾಮ-1 ಕೇಂದ್ರಗಳ ಸ್ಥಾಪನೆ.

ರಾಜ್ಯದ ನಾಗರಿಕರು ಜಾಲತಾಣದ ಮೂಲಕ ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿ ಸಲ್ಲಿಸಲು ಮತ್ತು ಮಾಹಿತಿ ಪಡೆಯಲು ‘ಮಾಹಿತಿ ಕಣಜ’ ತಂತ್ರಾಂಶ ಅಭಿವೃದ್ಧಿ.

ರಾಜ್ಯದ ಸರ್ಕಾರಿ ಜಮೀನುಗಳ ಸಂರಕ್ಷಣೆಗೆ ಸಮಿತಿ ರಚನೆ. ಬೆಂಗಳೂರು ಮತ್ತು ಇತರ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿನ ಭೂ ಕಬಳಿಕೆ ಮತ್ತು ಅವ್ಯವಹಾರದ ಬಗ್ಗೆ ಸಮಿತಿ ನಿರ್ದೇಶನದಂತೆ ಕ್ರಮ.

ಸಾರ್ವಜನಿಕರಿಗೆ ಒದಗಿಸಲಾಗುವ ವಿವಿಧ ಪ್ರಮಾಣ ಪತ್ರಗಳನ್ನು ತಕ್ಷಣ ಒದಗಿಸುವಂತಹ ಸಿದ್ಧ-ಸೇವೆ ಯೋಜನೆಯ ಅನುಷ್ಠಾನಕ್ಕೆ ಮೂರು ಕೋಟಿ ರೂ. ಅನುದಾನ.

ರಾಜ್ಯ ಸರ್ಕಾರದ ಕೆಲವು ಕಚೇರಿಗಳನ್ನು ಹಂತ ಹಂತವಾಗಿ ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ಸ್ಥಳಾಂತರಿಸಲು ಕ್ರಮ.

ರಾಜ್ಯದ 22.5 ಲಕ್ಷ ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತರಿಗೆ ಜ್ಯೋತಿ ಸಂಜೀವಿನಿ ಯೋಜನೆ ಮಾರ್ಪಡಿಸಿ, ಶಸ್ತ್ರ ಚಿಕಿತ್ಸಾ ವಿಧಾನಗಳಿಗೆ ನಗದುರಹಿತ ಚಿಕಿತ್ಸಾ ಸೌಲಭ್ಯ. ಇದರ ಅಂದಾಜು ವಾರ್ಷಿಕ ವೆಚ್ಚ 50 ಕೋಟಿ ರೂ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ‘ಜನಸ್ನೇಹಿ ಸಹಾಯ ವೇದಿಕೆ’ ಯೋಜನೆಯನ್ನು ಬಲ ಪಡಿಸಲು ಐದು ಕೋಟಿ ರೂ. ನೆರವು.

ಡಿಜಿಟಲ್ ಮಾಧ್ಯಮ ಜಾಹೀರಾತು ನೀತಿ ಜಾರಿಗೆ ಕ್ರಮ. ಇದಕ್ಕಾಗಿ ಹಿರಿಯ ಪತ್ರಕರ್ತರೂ ಆಗಿದ್ದ ಖ್ಯಾತ ಸಾಹಿತಿ ಡಾ. ಡಿ.ವಿ. ಗುಂಡಪ್ಪ ಅವರ ಹೆಸರಿನಲ್ಲಿ ನಿಧಿ ಸ್ಥಾಪನೆ.

‘ಪೊಲೀಸ್ ಗೃಹ-2020’ ಯೋಜನೆಯ ಕಾಮಗಾರಿ ಮುಂದುವರೆಸಲು 200 ಕೋಟಿ ರೂ. ಅನುದಾನ.

ಬೆಂಗಳೂರು ಮಹಿಳೆಯರ ಸುರಕ್ಷತೆಗಾಗಿ ಅಭಿವೃದ್ಧಿ ಪಡಿಸಿರುವ ‘ಸುರಕ್ಷಾ ಆ್ಯಪ್’ ರಾಜ್ಯಾದ್ಯಂತ ವಿಸ್ತರಣೆ. ತುರ್ತು ಸ್ಪಂದನಾ ವಾಹನಗಳ ಮೂಲಕ ಮಹಿಳೆಯರ ರಕ್ಷಣೆಗೆ ಕ್ರಮ.

ಬೆಂಗಳೂರಿನ ಕಾನೂನು ಸುವ್ಯವಸ್ಥೆ ಕಾಪಾಡಲು ಪಿಂಕ್ ಹೊಯ್ಸಳ ಸೇರಿದಂತೆ 75 ಹೊಯ್ಸಳ ವಾಹನ ಹಾಗೂ ಇನ್ನಿತರ ಜಿಲ್ಲೆಗಳಿಗೆ ರಾಷ್ಟ್ರೀಯ ತುರ್ತು ಸ್ಪಂದನಾ ವ್ಯವಸ್ಥೆಯಡಿ (ಓಚಿಣioಟಿಚಿಟ ಇmeಡಿgeಟಿಛಿಥಿ ಖesಠಿoಟಿse Sಥಿsಣem) ಬಳಸಲು 75 ವಾಹನ ಖರೀದಿಗೆ ಕ್ರಮ.

ಪೊಲೀಸ್ ತರಬೇತಿ ಶಾಲೆಗಳಲ್ಲಿ ಹಾಗೂ ಸಿ.ಎ.ಆರ್., ಡಿ.ಎ.ಆರ್. ಕೇಂದ್ರ ಸ್ಥಾನಗಳಲ್ಲಿ ರಿಯಾಯಿತಿ ದರದಲ್ಲಿ ಮಹಿಳೆಯರಿಗೆ ಸ್ವಯಂ ರಕ್ಷಣೆ ತರಬೇತಿ

ರಾಜ್ಯದ ರಸ್ತೆ ಸಾರಿಗೆ ನಿಗಮಗಳ ವತಿಯಿಂದ 2450 ಹೊಸ ಬಸ್‍ಗಳನ್ನು ಖರೀದಿಸಲು ಕ್ರಮ.

ಆಟೋ ಚಾಲಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರತಿ ವರ್ಷ ಪ್ರತಿ ಕುಟುಂಬಕ್ಕೆ ರೂ. 2000 ನೆರವು. ರೂ. 40 ಕೋಟಿ ಅನುದಾನ.

ಆಡಳಿತ ಸುಧಾರಣೆ ಹಾಗೂ ಸಾರ್ವಜನಿಕ ಸೇವೆಗಳ ವಲಯಕ್ಕೆ ಒಟ್ಟಾರೆ ನಿಗದಿ ಪಡಿಸಿದ ಅನುದಾನ- ರೂ. 10,194 ಕೋಟಿ ಅನುದಾನ ನಿಗದಿಪಡಿಸಲಾಗಿದೆ.

ಹಿಂದುಳಿದ ತಾಲೂಕುಗಳ ಅಭಿವೃದ್ಧಿಗಾಗಿ ವಿಶೇಷ ಅಭಿವೃದ್ಧಿ ಯೋಜನೆ ಮುಂದುವರಿಕೆ, ರೂ. 3060 ಕೋಟಿ ಅನುದಾನ.

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ ರೂ. 1500 ಕೋಟಿ ಹೊಸದಾಗಿ ರಚಿಸಿರುವ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕøತಿಕ ಸಂಘದ ಚಟುವಟಿಕೆಗಳಿಗೆ ಮುಂದಿನ ವರ್ಷಗಳಲ್ಲಿ ರೂ. 500 ಕೋಟಿ ಪಂಚಾಯತ್ ಸಂಸ್ಥೆಗಳ ವಿಕೇಂದ್ರೀಕರಣ ಮತ್ತು ಬಲವರ್ಧನೆಗೆ ಪಂಚಾಯತ್‍ರಾಜ್ ಆಯುಕ್ತಾಲಯ ಪ್ರಾರಂಭ.

‘ಗ್ರಾಮೀಣ ಸುಮಾರ್ಗ ಯೋಜನೆ’ ಯಡಿ ಗ್ರಾಮೀಣ ರಸ್ತೆಗಳ ಸುಧಾರಣೆಗಾಗಿ ರೂ. 780 ಕೋಟಿ ಅನುದಾನ.

‘ಜಲಧಾರೆ’ ಯೋಜನೆಯಡಿಯಲ್ಲಿ ಂsiಚಿಟಿ Iಟಿಜಿಡಿಚಿsಣಡಿuಛಿಣuಡಿe Iಟಿvesಣmeಟಿಣ ಃಚಿಟಿಞ (ಂIIಃ) ನೆರವಿನೊಂದಿಗೆ 700 ಕೋಟಿ ರೂ. ವೆಚ್ಚದಲ್ಲಿ ವಿಜಯಪುರ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಬೃಹತ್ ಕುಡಿಯುವ ನೀರಿನ ಯೋಜನೆ ಜಾರಿ.

ಕೇಂದ್ರ ಸರ್ಕಾರದ ಜಲ ಜೀವನ್ ಮಿಷನ್ ಮತ್ತು ರಾಜ್ಯದ ಸಂಪನ್ಮೂಲ ಬಳಸಿಕೊಂಡು ಗ್ರಾಮೀಣ ಪ್ರದೇಶದಲ್ಲಿ ಪ್ರತಿ ಮನೆಗೆ ಕುಡಿಯುವ ನೀರಿನ ಸಂಪರ್ಕ ಕಲ್ಪಿಸಲು “ಮನೆ ಮನೆಗೆ ಗಂಗೆ” ನೂತನ ಯೋಜನೆ ಜಾರಿ.

ಗ್ರಾಮೀಣ ಮತ್ತು ನಗರ ಪ್ರದೇಶಗಳ ನೀರು ಪೂರೈಕೆ ಸಮನ್ವಯಕ್ಕೆ ಸಮಗ್ರ ನೀತಿ ಜಾರಿ. ಒಂದೇ ಸಚಿವಾಲಯದಡಿ ಸಂಬಂಧಿಸಿದ ಇಲಾಖೆ ಮತ್ತು ಸಂಸ್ಥೆಗಳ ಸೇರ್ಪಡೆ.

ರಾಜ್ಯದ 17 ನದಿ ಪಾತ್ರದ ಮಲಿನತೆಯನ್ನು ತಡೆಗಟ್ಟಲು 1690 ಕೋಟಿ ರೂ. ಮೊತ್ತದಲ್ಲಿ 20 ನಗರ ಪ್ರದೇಶಗಳ ಒಳಚರಂಡಿ ವ್ಯವಸ್ಥೆ ಹಾಗೂ ಒಂದು ಪಟ್ಟಣಕ್ಕೆ ಮಲತ್ಯಾಜ್ಯ ಸಂಸ್ಕರಣಾ ಘಟಕ (ಈಚಿeಛಿಚಿಟ Sಟuಜge ಚಿಟಿಜ Seಠಿಣಚಿge ಒಚಿಟಿಚಿgemeಟಿಣ) ಅಳವಡಿಕೆಗೆ ಕ್ರಮ, 100 ಕೋಟಿ ರೂ. ಅನುದಾನ.

ಎಲ್ಲ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸಮಗ್ರ ಘನತ್ಯಾಜ್ಯ ನಿರ್ವಹಣಾ ಕಾರ್ಯಕ್ರಮ ಜಾರಿ. ಕರ್ನಾಟಕ ನಗರ ವೀಕ್ಷಣಾಲಯದ ಸ್ಥಾಪನೆಗೆ ಕ್ರಮ.

ರಾಜ್ಯದಲ್ಲಿ ಹೂಡಿಕೆದಾರರಿಗೆ ಉತ್ತೇಜನ ನೀಡಲು, ಕೈಗಾರಿಕೆ ಸ್ಥಾಪನೆಗೆ ಗುರುತಿಸುವ ಜಾಗದಲ್ಲಿ ನೇರವಾಗಿ ಭೂಮಾಲೀಕರಿಂದ ಭೂಮಿ ಖರೀದಿಸಲು ಅನುಕೂಲವಾಗುವಂತೆ ಸಂಬಂಧಿಸಿದ ಕಾಯ್ದೆಗಳಿಗೆ ತಿದ್ದುಪಡಿಗೆ ಕ್ರಮ.

2020ರ ನವೆಂಬರ್ನಲ್ಲಿ ‘ಇನ್‍ವೆಸ್ಟ್ ಕರ್ನಾಟಕ-2020’ ಜಾಗತಿಕ ಹೂಡಿಕೆದಾರರ ಸಮಾವೇಶ ಆಯೋಜನೆ.

‘ಉತ್ಪನ್ನ ನಿರ್ದಿಷ್ಟ ಕೈಗಾರಿಕಾ ಕ್ಲಸ್ಟರ್ ಅಭಿವೃದ್ಧಿ’ ಯೋಜನೆಯಡಿ ಶಿವಮೊಗ್ಗ ಜಿಲ್ಲೆಯಲ್ಲಿ ‘ಹೆಲ್ತ್ ಅಂಡ್ ವೆಲ್‍ನೆಸ್ ಕ್ಲಸ್ಟರ್’ ಮತ್ತು ಧಾರವಾಡ ಜಿಲ್ಲೆಯಲ್ಲಿ `ಹೋಮ್ ಅಂಡ್ ಪರ್ಸನಲ್ ಕೇರ್ ಕನ್ಸ್ಯೂಮರ್ ಗೂಡ್ಸ್ ಮ್ಯಾನುಫ್ಯಾಕ್ಚರಿಂಗ್ ಕ್ಲಸ್ಟರ್’ ಸ್ಥಾಪನೆ.

ಸಣ್ಣ ಮತ್ತು ಸೂಕ್ಷ್ಮ ಕೈಗಾರಿಕೆಗಳ ಅನುಕೂಲಕ್ಕಾಗಿ ಬೆಂಗಳೂರಿನಲ್ಲಿ ಕೈಗಾರಿಕೆಗಳ ಸಹಯೋಗದೊಂದಿಗೆ ‘ಅeಟಿಣಡಿe ಜಿoಡಿ Smಚಿಡಿಣ ಒಚಿಟಿuಜಿಚಿಛಿಣuಡಿiಟಿg’ ಸ್ಥಾಪನೆಗೆ ಐದು ಕೋಟಿ ರೂ. ಅನುದಾನ.

ನಾರು ಆಧಾರಿತ ಉತ್ಪನ್ನಗಳ ಬಗ್ಗೆ ಅರಿವು ಮೂಡಿಸಲು ಮತ್ತು ವ್ಯಾಪಕ ಮಾರುಕಟ್ಟೆ ಒದಗಿಸಲು ಐದು ಕೋಟಿ ರೂ.ಗಳ ವೆಚ್ಚದಲ್ಲಿ ‘ಅoiಡಿ ಇxಠಿeಡಿieಟಿಛಿe ಅeಟಿಣಡಿe’ ಸ್ಥಾಪನೆ.

ಕೇಂದ್ರ ಸರ್ಕಾರದ ‘ಪವರ್ಟೆಕ್ಸ್ ಇಂಡಿಯಾದ ನೂಲು ನಿಧಿ ಯೋಜನೆ’ಯಡಿ ಕೇಂದ್ರ ಸರ್ಕಾರದ ವಂತಿಗೆ ಹಾಗೂ ರಾಜ್ಯ ಸರ್ಕಾರದ ಗರಿಷ್ಠ 50 ಲಕ್ಷ ರೂ. ಸಹಾಯಧನದೊಂದಿಗೆ ಎರಡು ಕೇಂದ್ರಗಳಲ್ಲಿ ನೂಲಿನ ಘಟಕ ಸ್ಥಾಪನೆ.

ನೇಕಾರರ ಸಾಲ ಮನ್ನಾ ಯೋಜನೆ ಪೂರ್ಣಗೊಳಿಸಲು 79.57 ಕೋಟಿ ರೂ. ಅನುದಾನ.

ಹಿಂದುಳಿದ ಪ್ರದೇಶಗಳು ಮತ್ತು ಟಯರ್-2 ಹಾಗೂ ಟಯರ್-3ರ ನಗರಗಳಿಗೆ ಬಂಡವಾಳ ಆಕರ್ಷಿಸುವ ನೂತನ ಕೈಗಾರಿಕಾ ನೀತಿ ಜಾರಿ. ಉದ್ಯೋಗ ಸೃಷ್ಟಿಗೆ ಆದ್ಯತೆ.

ರಾಜ್ಯದ ವ್ಯಾಪ್ತಿಯಲ್ಲಿ ಅಮೂಲ್ಯ ಖನಿಜಗಳ (ಊigh ಗಿಚಿಟue ಒiಟಿeಡಿಚಿಟs) ನಿಕ್ಷೇಪಗಳನ್ನು ಗುರುತಿಸಲು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಕೇಂದ್ರ ಕಚೇರಿಯಲ್ಲಿ ಖನಿಜಾನ್ವೇಷಣೆ ವಿಭಾಗ ಸ್ಥಾಪನೆ.

ಎಲ್ಲಾ ಇಲಾಖೆಗಳಿಗೆ ಹಾಗೂ ನಿಗಮ-ಮಂಡಳಿಗಳಿಗೆ ವಿವಿಧ ಕಾಮಗಾರಿಗಳಿಗೆ ಏಕರೂಪ ಅನುಸೂಚಿ ದರಗಳನ್ನು ರೂಪಿಸಲು ಕ್ರಮಕೈಗೊಳ್ಳಲಾಗಿದೆ.

ವಿದೇಶಿ ಬಂಡವಾಳ ಹೂಡಿಕೆಯನ್ನು ಆಕರ್ಷಿಸಲು ಹಾಗೂ ವಿದೇಶಿ ಸರ್ಕಾರ ಮತ್ತು ಕಂಪೆನಿಗಳೊಂದಿಗೆ ಸಂಬಂಧಗಳನ್ನು ಬಲಪಡಿಸಲು ಏಳು ಕೋಟಿ ರೂ. ವೆಚ್ಚದಲ್ಲಿ ಕರ್ನಾಟಕ ತಂತ್ರಜ್ಞಾನ ಮಿಷನ್ ಸ್ಥಾಪನೆ ಮಾಡುವುದಾಗಿ ಘೋಷಿಸಿದರು.

2025ರ ವೇಳೆಗೆ ಭಾರತದ ಜೈವಿಕ ಆರ್ಥಿಕತೆಗೆ ಕರ್ನಾಟಕದ ಕೊಡುಗೆಯನ್ನು ಶೇ. 50 ಕ್ಕೆ ಹೆಚ್ಚಿಸಲು ಮಾರ್ಗಸೂಚಿ ಮತ್ತು ಕಾರ್ಯತಂತ್ರವನ್ನು ರೂಪಿಸಲು ಕ್ರಮ.

ಬೆಂಗಳೂರು ಸಮಗ್ರ ಅಭಿವೃದ್ಧಿ

ಪರಿಣಾಮಕಾರಿ ಆಡಳಿತ ಹಾಗೂ ನಾಗರಿಕ ಸೇವೆಗಳನ್ನು ನೀಡಲು, ಬೆಂಗಳೂರು ನಗರಕ್ಕೆ ಸೀಮಿತವಾಗಿ, ಪ್ರತ್ಯೇಕ ಪೌರನಿಗಮ ಕಾಯ್ದೆ ರಚನೆ.

ಬೆಂಗಳೂರು ನಗರದ ಸರ್ವತೋಮುಖ ಅಭಿವೃದ್ಧಿಗೆ 8344 ಕೋಟಿ ರೂ. ಮೊತ್ತದ ‘ಮುಖ್ಯಮಂತ್ರಿಗಳ ನವ ನಗರೋತ್ಥಾನ’ ಯೋಜನೆ ಅನುಷ್ಠಾನ.

ಬೆಂಗಳೂರು ನಗರದ ಘನತ್ಯಾಜ್ಯ ನಿರ್ವಹಣೆಗೆ “ಶುಭ್ರ ಬೆಂಗಳೂರು” ಯೋಜನೆಯಡಿ 999 ಕೋಟಿ ರೂ. ಅನುದಾನದ ಕ್ರಿಯಾಯೋಜನೆ ಅನುಷ್ಠಾನ.

ಬೆಂಗಳೂರು ನಗರದ ಕೆರೆಗಳ ಸರ್ವತೋಮುಖ ಅಭಿವೃದ್ಧಿಗೆ ಶುಭ್ರ ಬೆಂಗಳೂರು ಹಾಗೂ ಮುಖ್ಯಮಂತ್ರಿಗಳ ನವ ನಗರೋತ್ಥಾನ ಕ್ರಿಯಾ ಯೋಜನೆಗಳಡಿ ಒಟ್ಟು 417 ಕೋಟಿ ರೂ. ನಿಗದಿ.

ಬೆಂಗಳೂರು ನಗರದ ಬೃಹತ್ ನೀರುಗಾಲುವೆಗಳ ಜಾಲದಲ್ಲಿರುವ ಕೊರತೆಗಳನ್ನು ಅಭಿವೃದ್ಧಿ ಕಾಮಗಾರಿಗೆ 200 ಕೋಟಿ ರೂ. ಅನುದಾನ ನೀಡಲಾಗಿದೆ.

ನಮ್ಮ ಮೆಟ್ರೊ ಯೋಜನೆಯಡಿ ಮೈಸೂರು ರಸ್ತೆಯಲ್ಲಿ ಕೆಂಗೇರಿಯವರೆಗೆ ಮತ್ತು ಕನಕಪುರ ರಸ್ತೆಯಲ್ಲಿ ಅಂಜನಾಪುರ ಟೌನ್‍ಷಿಪ್‍ವರೆಗೆ ಒಟ್ಟು 12.8 ಕಿ.ಮೀ. ಉದ್ದದ ಮೆಟ್ರೋ ಕಾಮಗಾರಿ ಪೂರ್ಣಗೊಳಿಸಿ, 2020 ರಲ್ಲಿ ಸೇವೆ ಒದಗಿಸಲು ಕ್ರಮ.

ಮೆಟ್ರೋ ಪ್ರಯಾಣಿಕರಲ್ಲದ ಪಾದಚಾರಿಗಳಿಗೆ 24 ಮೆಟ್ರೋ ನಿಲ್ದಾಣಗಳ ಮೂಲಕ ಮೇಲ್ಸೇತುವೆ ಸೌಲಭ್ಯ.

ಸರ್ವೋದಯ ಮತ್ತು ಕ್ಷೇಮಾಭಿವೃದ್ಧಿ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನಾಂಗದವರ ಕಲ್ಯಾಣಕ್ಕೆ ಎಸ್‍ಸಿಎಸ್‍ಪಿ/ ಟಿಎಸ್‍ಪಿ ಅಡಿ 26,930 ಕೋಟಿ ರೂ. ಅನುದಾನ ನಿಗದಿ. ಇದು ನಿಯಮಾನುಸಾರ ಹಂಚಿಕೆ ಮಾಡಬೇಕಾದ ಮೊತ್ತಕ್ಕಿಂತ ಹೆಚ್ಚು.

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ನಡೆಸುವ ವಸತಿ ಶಾಲೆಗಳಲ್ಲಿ ಆಯಾ ತಾಲೂಕಿನ ವಿದ್ಯಾರ್ಥಿಗಳಿಗೆ ಕನಿಷ್ಟ ಶೇ. 25 ರಷ್ಟು ಸೀಟು ಹಂಚಿಕೆಗೆ ಕ್ರಮ. ಈ ವಸತಿ ಶಾಲೆಗಳಿಗೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಮೇಲ್ವಿಚಾರಣಾ ಸಮಿತಿ ರಚನೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರು ನಿರ್ವಹಿಸುತ್ತಿರುವ ಸಹಕಾರ ಸಂಘಗಳಿಗೆ ಆರ್ಥಿಕ ಚಟುವಟಿಕೆಗಳಿಗಾಗಿ ನೀಡುವ ಷೇರು ಬಂಡವಾಳ ದ್ವಿಗುಣಗೊಳಿಸಿ 20 ಲಕ್ಷ ರೂ. ಗಳಿಗೆ ಹೆಚ್ಚಳ.

ಪ್ರತಿ ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ, ಹಲಗಲಿ ಬೇಡರ ಬಂಡಾಯದಲ್ಲಿ ಹುತಾತ್ಮರಾದ ಜಡಗ ಮತ್ತು ಬಾಲ ಇವರ ಹೆಸರಿನಲ್ಲಿ ಒಂದು ಲಕ್ಷ ರೂ. ನಗದು ಪ್ರಶಸ್ತಿ ನೀಡಲು ಕ್ರಮ. 60 ಲಕ್ಷ ರೂ. ಅನುದಾನ.

ಶಿವಮೊಗ್ಗ ಮತ್ತು ಮೈಸೂರು ಜಿಲ್ಲೆಗಳಲ್ಲಿ ಬುಡಕಟ್ಟು ಜನರ ಪಾರಂಪರಿಕ ವೈದ್ಯಪದ್ಧತಿ ಮತ್ತು ಆಚರಣೆಗಳ ದಾಖಲೀಕರಣ ಮತ್ತು ಆಯ್ದ ಔಷಧಿಗಳ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಎರಡು ಕೋಟಿ ರೂ. ಅನುದಾನ.

‘ಚರ್ಮ ಶಿಲ್ಪ’ ಎಂಬ ಯಂತ್ರಾಧಾರಿತ ಉತ್ಪಾದನಾ ಘಟಕಗಳ ಸ್ಥಾಪನೆಗೆ 250 ಚರ್ಮ ಕುಶಲಕರ್ಮಿಗಳಿಗೆ ಡಾ. ಬಾಬು ಜಗಜೀವನ್‍ರಾಮ್ ಚರ್ಮ ಕೈಗಾರಿಕೆ ಅಭಿವೃದ್ಧಿ ನಿಗಮದ ಮೂಲಕ ಘಟಕ ವೆಚ್ಚ 10 ಲಕ್ಷ ರೂ.ಗಳಲ್ಲಿ ಐದು ಲಕ್ಷ ರೂ. ಸಹಾಯಧನ. 12.50 ಕೋಟಿ ರೂ. ಅನುದಾನ.

ಅಲೆಮಾರಿ/ಅರೆ ಅಲೆಮಾರಿ ಸಮುದಾಯಗಳ ಸಮಗ್ರ ಅಭಿವೃದ್ಧಿಗೆ 78 ಕೋಟಿ ರೂ. ಅನುದಾನ.

ಹಿಂದುಳಿದ ಸಮುದಾಯಗಳ ಅಭಿವೃದ್ಧಿಗೆ ಹಾಗೂ ವಿವಿಧ ನಿಗಮಗಳಿಗೆ 125 ಕೋಟಿ ರೂ. ಅನುದಾನ.

ಇ-ವಾಣಿಜ್ಯ ಉತ್ಪನ್ನಗಳನ್ನು ಸರಬರಾಜು ಮಾಡುವ ಯುವಕರಿಗೆ ಬೈಕ್ ಕೊಳ್ಳಲು ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಸಾವಿರ ಯುವಕರಿಗೆ ತಲಾ 25,000 ರೂ.ಗಳಂತೆ 2.5 ಕೋಟಿ ರೂ. ಆರ್ಥಿಕ ನೆರವು.

ಅಲ್ಪಸಂಖ್ಯಾತರು ಹೆಚ್ಚಿನ ಸಂಖ್ಯೆಯಲ್ಲಿ ವಾಸವಿರುವ ಅಧಿಸೂಚಿತವಲ್ಲದ ಕೊಳಚೆ ಪ್ರದೇಶಗಳ ಅಭಿವೃದ್ಧಿಗೆ 200 ಕೋಟಿ ರೂ. ಅನುದಾನ.

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಐದು ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ಪದವಿ ಪೂರ್ವ ಕಾಲೇಜನ್ನಾಗಿ ಉನ್ನತೀಕರಿಸಲು ಕ್ರಮ.

ಕ್ರೈಸ್ತ ಸಮುದಾಯದವರ ಸರ್ವತೋಮುಖ ಅಭಿವೃದ್ಧಿಗೆ 200 ಕೋಟಿ ರೂ. ಅನುದಾನ.

ಅಪೂರ್ಣ ಹಂತದ ಎರಡು ಲಕ್ಷ ಮನೆಗಳನ್ನು ಪೂರ್ಣಗೊಳಿಸಿ, ವಸತಿ ರಹಿತರಿಗೆ ಹಂಚಿಕೆ ಮಾಡಲು 2500 ಕೋಟಿ ರೂ.

ಸರ್ಕಾರದ ವಸತಿ ಯೋಜನೆಗಳಡಿ ಮನೆಗಳನ್ನು ನಿರ್ಮಿಸಿಕೊಂಡು ಹತ್ತು ವರ್ಷವಾಗಿದ್ದಲ್ಲಿ, ರಾಜೀವ್ ಗಾಂಧಿ ವಸತಿ ನಿಗಮಕ್ಕೆ ಅಡಮಾನವಿಡಲಾದ ನಿವೇಶನವನ್ನು ಡೀಮ್ಡ್ ರಿಲೀಸ್ ಎಂದು ಪರಿಗಣಿಸಲು ಕ್ರಮ.

ನಬಾರ್ಡ್ ಸಹಯೋಗದಲ್ಲಿ 758 ಕೋಟಿ ರೂ. ವೆಚ್ಚದಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ 26 ಜಿಲ್ಲೆಗಳ 3386 ಸರ್ಕಾರಿ ಶಾಲೆಗಳ 6469 ಶಾಲಾ ಕೊಠಡಿಗಳ ಪುನರ್ ನಿರ್ಮಾಣಕ್ಕೆ ಕ್ರಮ.

ಶಾಸಕರು ತಮ್ಮ ಕ್ಷೇತ್ರದ ವ್ಯಾಪ್ತಿಯ ತಲಾ ಮೂರು ಶಾಲೆಗಳ ದತ್ತು ಸ್ವೀಕಾರ ಮತ್ತು ಅಭಿವೃದ್ಧಿಗೆ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಕ್ರಮ.

ರಾಜ್ಯದ ಆಯ್ದ ಐದು ಜಿಲ್ಲೆಗಳಲ್ಲಿ ಐದು ಕೋಟಿ ರೂ. ವೆಚ್ಚದಲ್ಲಿ ಬಡ ರೋಗಿಗಳಿಗೆ ಉಚಿತ ಪೆರಿಟೋನಿಯಲ್ ಡಯಾಲಿಸಿಸ್ ಸೇವೆ.

ಆಯ-ವ್ಯಯದಲ್ಲಿ ಮಹಿಳೆಯರ ಕಲ್ಯಾಣಕ್ಕಾಗಿ 37,783 ಕೋಟಿ ರೂ.ಗಳ 953 ಕಾರ್ಯಕ್ರಮಗಳ ನಿಗದಿ. ಇದು ಒಟ್ಟಾರೆ ಆಯವ್ಯಯ ಗಾತ್ರದ ಶೇ.15.88 ರಷ್ಟು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಎಲ್ಲಾ ಕಾರ್ಯಕ್ರಮಗಳನ್ನು ಪಾರದರ್ಶಕವಾಗಿ ಮಹಿಳೆಯರಿಗೆ ತಲುಪಿಸಲು ಮಹಿಳಾ ಸುರಕ್ಷತಾ ಪೋರ್ಟಲ್ ಪ್ರಾರಂಭ.

ಬಾಲಮಂದಿರದಿಂದ 21 ವರ್ಷ ತುಂಬಿದ ನಂತರ ಬಿಡುಗಡೆ ಹೊಂದುವವರಿಗೆ ಜೀವನೋಪಾಯ ರೂಪಿಸಿಕೊಳ್ಳಲು ‘ಉಪಕಾರ’ ಯೋಜನೆಯಡಿ ಮೂರು ವರ್ಷ ಅವಧಿಗೆ ಮಾಸಿಕ 5000 ರೂ. ಆರ್ಥಿಕ ನೆರವು; ಕೌಶಲ್ಯಾಭಿವೃದ್ಧಿ ತರಬೇತಿಗೆ ಕ್ರಮ. ಒಂದು ಕೋಟಿ ರೂ. ಅನುದಾನ.

ಶ್ರವಣದೋಷವುಳ್ಳ ವ್ಯಕ್ತಿಗಳ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರ ವಿತರಿಸಲು 60 ಲಕ್ಷ ರೂ. ಅನುದಾನ.

ದೃಷ್ಟಿದೋಷವುಳ್ಳ ವ್ಯಕ್ತಿಗಳಿಗಾಗಿ ಬೆಂಗಳೂರಿನಲ್ಲಿ ಹಾಗೂ ಕಲಬುರಗಿಯಲ್ಲಿ 30 ಲಕ್ಷ ರೂ.ಗಳ ವೆಚ್ಚದಲ್ಲಿ ಬ್ರೈಲ್ ಕಂ ಟಾಕಿಂಗ್ ಲೈಬ್ರರಿ ಸ್ಥಾಪನೆ. ಮೈಸೂರಿನ ಸರ್ಕಾರಿ ಬ್ರೈಲ್ ಮುದ್ರಣಾಲಯಕ್ಕೆ 80 ಲಕ್ಷ ರೂ.ಗಳ ವೆಚ್ಚದಲ್ಲಿ ಆಧುನಿಕ ಮುದ್ರಣ ಯಂತ್ರ ಖರೀದಿ.

ರಾಜ್ಯದ 500 ಅಂಧ ವಿದ್ಯಾರ್ಥಿಗಳಿಗೆ ತಲಾ 25,000 ರೂ.ಗಳ ಮೊತ್ತದ ಟಾಕಿಂಗ್ ಮೊಬೈಲ್, ಬ್ರೈಲ್ ವಾಚ್ ಹಾಗೂ ವಾಕಿಂಗ್ ಸ್ಟಿಕ್‍ಗಳನ್ನೊಳಗೊಂಡ ಕಿಟ್ ವಿತರಣೆ. 1.25 ಕೋಟಿ ರೂ. ಅನುದಾನ.

ಅಂಧ ತಾಯಂದಿರಿಗೆ ನೀಡುವ ಮಾಸಿಕ 2000 ರೂ. ಶಿಶುಪಾಲನಾ ಭತ್ಯೆ ಯೋಜನೆ ಮಗುವಿನ ಮೊದಲ ಎರಡು ವರ್ಷಗಳಿಂದ ಐದು ವರ್ಷದ ವರೆಗೆ ವಿಸ್ತರಣೆ.

‘ಮುಖ್ಯಮಂತ್ರಿಗಳ ಆರೋಗ್ಯ ಸುರಕ್ಷಾ’ ಯೋಜನೆಯಡಿಯಲ್ಲಿ ಒಂದು ಲಕ್ಷ ನೋಂದಾಯಿತ ಕಟ್ಟಡ ಕಾರ್ಮಿಕರು ಮತ್ತು ಅವರ ಕುಟುಂಬದ ಸದಸ್ಯರುಗಳಿಗೆ ಅನುಮೋದಿತ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ‘ಉಚಿತ ಪ್ರಿಪೇಯ್ಡ್ ಹೆಲ್ತ್ ಕಾರ್ಡ್’ ವಿತರಣೆ.

‘ವನಿತಾ ಸಂಗಾತಿ’ ಯೋಜನೆಯಡಿ ಗಾರ್ಮೆಂಟ್ ಉದ್ಯಮಗಳಲ್ಲಿ ಕಾರ್ಯನಿರ್ವಹಿಸುವ ಮಹಿಳಾ ಕಾರ್ಮಿಕರಿಗೆ ಉಚಿತ ಬಿಎಂಟಿಸಿ ಮಾಸಿಕ ಬಸ್ ಪಾಸ್ ವಿತರಣೆಗೆ 25 ಕೋಟಿ ರೂ. ಅನುದಾನ.

ನಗರ ಪ್ರದೇಶಗಳಲ್ಲಿ ದುಡಿಯುತ್ತಿರುವ ಕಟ್ಟಡ ಕಾರ್ಮಿಕರು ಮತ್ತು ಅವರ ಕುಟುಂಬಸ್ಥರ ಆರೋಗ್ಯ ರಕ್ಷಣೆಗೆ 10 ‘ಮೊಬೈಲ್ ಕ್ಲಿನಿಕ್’ ಪ್ರಾರಂಭ.

ಕಟ್ಟಡ ಕಾರ್ಮಿಕರ ಮಕ್ಕಳ ಪಾಲನೆಗೆ ಕಟ್ಟಡ ನಿರ್ಮಾಣ, ಸ್ಥಳದಲ್ಲಿ 10 ಸಂಚಾರಿ ಶಿಶುಪಾಲನಾ ಕೇಂದ್ರಗಳನ್ನು ಒಳಗೊಂಡಂತೆ ಒಟ್ಟು 110 ‘ಕಿತ್ತೂರು ರಾಣಿ ಚೆನ್ನಮ್ಮ’ ಶಿಶು ಪಾಲನಾ ಕೇಂದ್ರಗಳ ಸ್ಥಾಪನೆ.

‘ಆಹಾರ’ ತಂತ್ರಾಂಶ ಉನ್ನತೀಕರಿಸಲು ಕ್ರಮ.

ಕಾನೂನು ಮಾಪನ ಶಾಸ್ತ್ರ ಇಲಾಖೆಯ ಚಟುವಟಿಕೆಗಳ ಮೇಲ್ವಿಚಾರಣೆ ಮತ್ತು ಉ�