ಮಡಿಕೇರಿ, ಮಾ. 6: ಕೊಡಗು ಹಾಗೂ ಮೈಸೂರಿನ ವಿವಿಧೆಡೆ 101 ಪ್ರದರ್ಶನ ಕಂಡಿರುವ ಕೊಡಗ್‍ರ ಸಿಪಾಯಿ ಚಲನಚಿತ್ರದ ಪ್ರದರ್ಶನ ಬೆಂಗಳೂರು ಕೊಡವ ಸಮಾಜದ ಸಭಾಂಗಣದಲ್ಲಿ ನಡೆಯಿತು.

ಕೂರ್ಗ್ ಕಾಫಿವುಡ್ ಮೂವೀಸ್ ಬ್ಯಾನರ್ ಅಡಿಯಲ್ಲಿ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ನಿರ್ದೇಶನದ ಉಳುವಂಗಡ ಕಾವೇರಿ ಉದಯ ಬರೆದಿರುವ ಕೊಡವ ಕಾದಂಬರಿ ಆಧಾರಿತ ಚಿತ್ರ ಇದಾಗಿದ್ದು, ಬೆಂಗಳೂರು ಕೊಡವ ಸಮಾಜದಲ್ಲಿ ಐದು ಪ್ರದರ್ಶನ ಕಂಡಿತು.

ವೇದಿಕೆ ಕಾರ್ಯಕ್ರಮದಲ್ಲಿ ಬೆಂಗಳೂರು ಕೊಡವ ಸಮಾಜದ ಅಧ್ಯಕ್ಷ ಮುಕ್ಕಾಟಿರ ಟಿ. ನಾಣಯ್ಯ ಚಿತ್ರ ನಿರ್ದೇಶಕ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ಕೊಡವ ಸಮಾಜದ ಕಾರ್ಯದರ್ಶಿ ಚಿರಿಯಪಂಡ ಸುರೇಶ್ ನಂಜಪ್ಪ ಚಿತ್ರದ ನಾಯಕ ನಟ ತೀತಮಾಡ ಅರ್ಜುನ್ ದೇವಯ್ಯ ಬೆಂಗಳೂರು ಕೊಡವ ಸಮಾಜದ ಜಂಟಿ ಕಾರ್ಯದರ್ಶಿ ಕೊಕ್ಕಲೇರ ಟಿ. ಕುಟ್ಟಪ್ಪ, ಕೊಡವ ಸಮಾಜದ ಉಪಾಧ್ಯಕ್ಷೆ ಮುಲ್ಲೇಂಗಡ ಮೀರಾ ಜಲಜಕುಮಾರ್, ಕೊಡವ ಸಮಾಜ ಯುವ ಘಟಕದ ಅಧ್ಯಕ್ಷ ಚೊಕಂಡ ಸೂರಜ್ ಸೋಮಯ್ಯ, ಕೊಡವ ಮಕ್ಕಟ ಕೂಟದ ಅಧ್ಯಕ್ಷ ಬೊಳ್ಳಜಿರ ಬಿ. ಅಯ್ಯಪ್ಪ ಸೇರಿದಂತೆ ಚಿತ್ರದ ನಟರು, ಕೊಡವ ಸಮಾಜದ ಪದಾಧಿಕಾರಿಗಳು ಇತರರು ಹಾಜರಿದ್ದರು.