ಮಡಿಕೇರಿ, ಮಾ. 5: ತಾಲೂಕಿನ ಜೋಡುಪಾಲ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ನಿರ್ಮಿಸಿರುವ ಶಾಲಾ ಕೊಠಡಿಯ ಉದ್ಘಾಟನಾ ಕಾರ್ಯಕ್ರಮವು ತಾ. 7 ರಂದು 10.30 ಗಂಟೆಗೆ ನಡೆಯಲಿದೆ. ಹಾಗೆಯೇ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಪ್ರಾಯೋಜಕತ್ವದಲ್ಲಿ ವಿಶೇಷ ಘಟಕ ಹಾಗೂ ಗಿರಿಜನ ಉಪಯೋಜನೆಯಡಿ ಗುರು-ಶಿಷ್ಯ ಪರಂಪರೆ ಕಾರ್ಯಕ್ರಮದ ಸಮಾರೋಪ ಸಮಾರಂಭ ನಡೆಯಲಿದೆ.

ನಂತರ ಮಧ್ಯಾಹ್ನ 2 ಗಂಟೆಗೆ ಖ್ಯಾತ ಯಕ್ಷಗಾನ ಹಾಸ್ಯ ಕಲಾವಿದ ಕೆ. ಮಹಾಭಲೇಶ್ವರ ಭಟ್ ಅವರು ನಿರ್ದೇಶನ ನೀಡಿ ತರಬೇತಿಯನ್ನು ಪಡೆದಿರುವ ಶಿಬಿರಾರ್ಥಿಗಳಿಂದ ಯಜ್ಞ ಸಂರಕ್ಷಣೆ ಎಂಬ ಯಕ್ಷಗಾನ ಪ್ರದರ್ಶನ ನಡೆಯಲಿದೆ.