ನಾಪೆÇೀಕ್ಲು, ಮಾ. 7: ಪಾಲೂರು ಶ್ರೀ ಮಹಾಲಿಂಗೇಶ್ವರ ದೇವಳದಲ್ಲಿ ತಾ. 8 ರಂದು (ಇಂದು) ನೂತನ ಧ್ವಜ ಸ್ತಂಭ ಪ್ರತಿಷ್ಠೆ ಮತ್ತು ಮಹಾ ಬಲಿಪೀಠದ ಪುನರ್ ಪ್ರತಿಷ್ಠೆ ಕಾರ್ಯಕ್ರಮವನ್ನು ನೀಲೇಶ್ವರ ಉಚ್ಚಿಲತ್ತಾಯ ಪಧ್ಮನಾಭ ತಂತ್ರಿಗಳು ನೆರವೇರಿಸಲಿದ್ದಾರೆ. ತಾ. 8 ರಂದು ಬೆಳಿಗ್ಗೆ ಗಣಪತಿ ಹೋಮ, 7.30ರ ಮೀನ ಲಗ್ನದಲ್ಲಿ ಧ್ವಜಸ್ತಂಭ ಪ್ರತಿಷ್ಠೆ, ಮಹಾಬಲಿಪೀಠ ಪ್ರತಿಷ್ಠೆ, ಶ್ರೀ ಮಹಾಲಿಂಗೇಶ್ವರ ಸಾನಿಧ್ಯದಲ್ಲಿ ಬಿಂಬ ಶುದ್ಧಿ, ಚತುಃಶುದ್ಧಿ, ಪಂಚಕದಾರೆ, ಸಾನಿಧ್ಯ, ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ ಕಾರ್ಯಗಳು ನಡೆಯಲಿದೆ. ಮಧ್ಯಾಹ್ನ 12 ಗಂಟೆಗೆ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದ್ದು ಭಕ್ತಾಧಿಗಳಿಗೆ ಅನ್ನದಾನವನ್ನು ಏರ್ಪಡಿಸಲಾಗಿದೆ.