ಮಡಿಕೇರಿ, ಮಾ. 7: ಐ.ಸಿ.ಎ.ಆರ್ ಕೃಷಿ ವಿಜ್ಞಾನ ಕೇಂದ್ರ, ಗೋಣಿಕೊಪ್ಪಲು, ಕೃಷಿ ಇಲಾಖೆ, ಕೊಡಗು ಜಿಲ್ಲೆ, ತೋಟಗಾರಿಕೆ ಇಲಾಖೆ, ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ, ಮೀನುಗಾರಿಕೆ ಇಲಾಖೆ ಮತ್ತು ಅರಣ್ಯ ಇಲಾಖೆ ಇವರುಗಳ ಸಹಯೋಗದಲ್ಲಿ ಆತ್ಮ ಯೋಜನೆಯಡಿಯಲ್ಲಿ ಎರಡು ದಿನದ ಕಿಸಾನ್ ಮೇಳ ಮತ್ತು ಪೆÇನ್ನಂಪೇಟೆ ಹೋಬಳಿ ಮಟ್ಟದ ಕೃಷಿ ಅಭಿಯಾನ ಕಾರ್ಯಕ್ರಮವನ್ನು ತಾ. 11 ಮತ್ತು 12 ರಂದು ಅತ್ತೂರಿನಲ್ಲಿ ಹಮ್ಮಿಕೊಳ್ಳಲಾಗಿದೆ.