ಮಡಿಕೇರಿ, ಮಾ. 8: ಪ್ರಸಕ್ತ ಸಾಲಿನಲ್ಲಿ ಕೊಡಗು ಜಿಲ್ಲಾ ಪೊಲೀಸ್ ಘಟಕದಲ್ಲಿ ಖಾಲಿ ಇದ್ದ ನಾಗರಿಕ ಪೊಲೀಸ್ ಕಾನ್ಸ್‍ಟೇಬಲ್ ಮತ್ತು ಮಹಿಳಾ ಕಾನ್ಸ್‍ಟೇಬಲ್ ಹಾಗೂ ಸಶಸ್ತ್ರ ಪೊಲೀಸ್ ಕಾನ್ಸ್‍ಟೇಬಲ್ ಹುದ್ದೆಗಳ ನೇಮಕಾತಿ ಸಂಬಂಧ ಈಗಾಗಲೇ ಲಿಖಿತ ಪರೀಕ್ಷೆಗೆ ಹಾಜರಾಗಿ 1:5 ರ ಅನುಪಾತದಲ್ಲಿ ಅರ್ಹಗೊಂಡ ಅಭ್ಯರ್ಥಿಗಳಿಗೆ ತಾ. 9, 10 ಮತ್ತು 11 ರಂದು ನಗರದ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ (ಮ್ಯಾನ್ಸ್ ಕಾಂಪೌಂಡ್) ಬೆಳಿಗ್ಗೆ 7 ಗಂಟೆಯಿಂದ ದೇಹದಾಢ್ರ್ಯತೆ ಮತ್ತು ಸಹಿಷ್ಣುತೆ ಪರೀಕ್ಷೆಗಳನ್ನು ನಡೆಸಲಾಗುವುದು.

ಈ ಬಗ್ಗೆ ಅರ್ಹ ಅಭ್ಯರ್ಥಿಗಳು ಮೇಲ್ಕಂಡ ದಿನಾಂಕಗಳಂದು ಸದರಿ ಪರೀಕ್ಷೆಗಾಗಿ ಕೇಳಲಾಗಿರುವ ಮೂಲ ದಾಖಲಾತಿಗಳೊಂದಿಗೆ ತಪ್ಪದೆ ಬೆಳಿಗ್ಗೆ 7 ಗಂಟೆಗೆ ಮಡಿಕೇರಿಯ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಹಾಜರಿರುವಂತೆ ಕೊಡಗು ಜಿಲ್ಲಾ ಪೊಲೀಸ್ ಅಧೀಕ್ಷಕರು ಕೋರಿದ್ದಾರೆ.