ಮಡಿಕೇರಿ, ಮಾ. 7: ಕೊಡವ ಮಕ್ಕಡ ಕೂಟ, ಅಖಿಲ ಕೊಡವ ಸಮಾಜ ಪೊಮ್ಮಕ್ಕಡ ಪರಿಷತ್ ವೀರಾಜಪೇಟೆ ಇವರ ಸಂಯುಕ್ತ ಆಶ್ರಯದಲ್ಲಿ 5 ಪುಸ್ತಕಗಳ ಬಿಡುಗಡೆ ಕಾರ್ಯಕ್ರಮ ತಾ. 8 ರಂದು (ಇಂದು) ನಗರದ ಪತ್ರಿಕಾ ಭವನದಲ್ಲಿ ನಡೆಯಲಿದೆ.

ಬೆಳಿಗ್ಗೆ 9.30 ಗಂಟೆಗೆ ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಬಿ ಅಯ್ಯಪ್ಪ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಮೇರಿಯಂಡ ಸಿ ನಾಣಯ್ಯ, ಮಂಗಳೂರು ವಿಶ್ವವಿದ್ಯಾನಿಲಯದ ಇತಿಹಾಸ ವಿಭಾಗದ ಪ್ರೋ. ಕೋಡಿರ ಲೋಕೇಶ್ ಮೊಣ್ಣಪ್ಪ, ಕೊಡಗು ಪ್ರೆಸ್‍ಕ್ಲಬ್ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ, ಮಡಿಕೇರಿ ಕೊಡವ ಸಮಾಜದ ಮಾಜಿ ಉಪಾಧ್ಯಕ್ಷ ಮಂಡೇಪಂಡ ರತನ್ ಕುಟ್ಟಯ್ಯ, ಸಾಹಿತಿ ಬಾಚರಣಿಯಂಡ ಪಿ ಅಪ್ಪಣ್ಣ, ಸಾಹಿತಿ ಹಾಗೂ ವೀರಾಜಪೇಟೆ ಪೊಮ್ಮಕ್ಕಡ ಪರಿಷತ್ ಅಧ್ಯಕ್ಷೆ ಬಾಚರಣಿಯಂಡ ರಾಣು ಅಪ್ಪಣ್ಣ, ಬರಹಗಾರ, ನಿರ್ದೇಶಕ, ನಿರ್ಮಾಪಕ, ನಟ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ, ಬರಹಗಾರ ಮೂಕೋಂಡ ನಿತಿನ್ ಕುಶಾಲಪ್ಪ, ಮಕ್ಕಡ ಕೂಟದ ಉಪಾಧ್ಯಕ್ಷ ಬಾಳೆಯಡ ಪ್ರತೀಶ್ ಪೂವಯ್ಯ ಹಾಗೂ ಕಾರ್ಯಕ್ರಮ ಸಂಚಾಲಕ ಹಾಗೂ ಕೊಡವ ಮಕ್ಕಡ ಕೂಟದ ಕಾರ್ಯದರ್ಶಿ ಪುತ್ತರಿರ ಕರುಣ್ ಕಾಳಯ್ಯ ಪಾಲ್ಗೊಳ್ಳಲಿದ್ದಾರೆ.

ಕಾರ್ಯಕ್ರಮದಲ್ಲಿ ಬಾಚರಣಿಯಂಡ ಪಿ ಅಪ್ಪಣ್ಣ ಹಾಗೂ ಬಾಚರಣಿಯಂಡ ರಾಣು ಅಪ್ಪಣ್ಣ ಬರೆದಿರುವ ಪಾಂಚಜನ್ಯ ಹಾಗೂ ಆಂಜ ಮುತ್ತ್, ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪರ ವೀರಚಕ್ರ ಹಾಗೂ ಮೋಹ ಪಾಶ, ಮೂಕೋಂಡ ನಿತಿನ್ ಕುಶಾಲಪ್ಪರವರ ಐತಿಚಂಡ ರಮೇಶ್ ಉತ್ತಪ್ಪ ಬರೆದಿರುವ ಕೊಡಗಿನ ಗಾಂಧಿ ಪಂದ್ಯಂಡ ಬೆಳ್ಯಪ್ಪ ಎಂಬ ಕನ್ನಡ ಪುಸ್ತಕವನ್ನು ಇಂಗ್ಲೀಷ್‍ಗೆ (ದಿ ಗಾಂಧಿ ಆಫ್ ಕೊಡಗು) ಅನುವಾದ ಮಾಡಿರುವ ಪುಸ್ತಕವು ಬಿಡುಗಡೆಗೊಳ್ಳಲಿದೆ.