ಮಡಿಕೇರಿ, ಮಾ.8 : ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಇತ್ತೀಚೆಗೆ ಮಂಡಿಸಿರುವ ಬಜೆಟ್‍ನಲ್ಲಿ ಶಾದಿಭಾಗ್ಯ ಯೋಜನೆಯನ್ನೇ ಕೈ ಬಿಡಲಾಗಿದ್ದು, ಈ ನಿರ್ಧಾರವನ್ನು ತೀವ್ರವಾಗಿ ಖಂಡಿಸುವುದಾಗಿ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಎಂ.ಎ.ಉಸ್ಮಾನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಹಿಂದೆ ಮುಖ್ಯಮಂತ್ರಿಗಳಾಗಿದ್ದ ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ಅವರುಗಳ ಅವಧಿಯಲ್ಲಿ ಶಾದಿಭಾಗ್ಯ ಯೋಜನೆಗೆ ಸಾಕಷ್ಟು ಅನುದಾನವನ್ನು ನೀಡಲಾಗಿತ್ತು. ಪ್ರಸ್ತುತ ರಾಜ್ಯದಲ್ಲಿ ಸುಮಾರು 33 ಸಾವಿರ ಫಲಾನುಭವಿಗಳ ಅರ್ಜಿ ವಿಲೇವಾರಿಯಾಗದೆ ಹಾಗೇ ಉಳಿದುಕೊಂಡಿದ್ದು, ಯೋಜನೆಯನ್ನೇ ರದ್ದುಗೊಳಿಸಿದರೆ ಹೇಗೆ ಎಂದು ಪತ್ರಿಕಾ ಹೇಳಿಕೆಯಲ್ಲಿ ಪ್ರಶ್ನಿಸಿದ್ದಾರೆ.