ಸುಂಟಿಕೊಪ್ಪ, ಮಾ. 7: ಸುಂಟಿಕೊಪ್ಪ ಸಮೀಪದ ಕೊಡಗರಹಳ್ಳಿ ಗ್ರಾಮ ಪಂಚಾಯಿತಿಯ ತ್ರೈಮಾಸಿಕ ಕೆ.ಡಿ.ಪಿ. ಸಭೆ ತಾ. 10 ರಂದು ಪೂರ್ವಾಹ್ನ 10-30ಕ್ಕೆ ಪಂಚಾಯಿತಿ ಅಧ್ಯಕ್ಷ ಹೆಚ್.ಇ. ಅಬ್ಬಾಸ್ ಅಧ್ಯಕ್ಷತೆಯಲ್ಲಿ ಅಲ್ಲಿನ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ ನಡೆಯಲಿದೆ.
ಮಕ್ಕಳ ಗ್ರಾಮ ಸಭೆ
ಅದೇ ದಿನ ಮಧ್ಯಾಹ್ನ 2.30 ಗಂಟೆಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪಂಚಾಯಿತಿ ಅಧ್ಯಕ್ಷ ಅಬ್ಬಾಸ್ ಅಧ್ಯಕ್ಷತೆಯಲ್ಲಿ ಮಕ್ಕಳ ಗ್ರಾಮ ಸಭೆ ನಡೆಯಲಿದೆ. ಸುಂಟಿಕೊಪ್ಪ ಸಹಾಯಕ ತೋಟಗಾರಿಕಾ ಅಧಿಕಾರಿ ಶರತ್ ಅವರು ನೋಡಲ್ ಅಧಿಕಾರಿಯಾಗಿ ಗ್ರಾಮಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಪಂಚಾಯಿತಿಯ ಪ್ರಕಟಣೆ ತಿಳಿಸಿದೆ.