ಸೋಮವಾರಪೇಟೆ, ಮಾ. 8: ನೆಹರು ಯುವ ಕೇಂದ್ರ, ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ, ತಾಲೂಕು ಯುವ ಒಕ್ಕೂಟ, ಶುಂಠಿಮಂಗಳೂರಿನ ಬಸವೇಶ್ವರ ಯುವಕ ಸಂಘದ ಸಂಯುಕ್ತ ಆಶ್ರಯದಲ್ಲಿ ಚಾಣಕ್ಯ ಕಾಲೇಜಿನ ಸಭಾಂಗಣದಲ್ಲಿ ನೆರೆಹೊರೆ ಯುವಜನ ಸಂಸತ್ತು ಕಾರ್ಯಕ್ರಮ ನಡೆಯಿತು.

ಬಸವೇಶ್ವರ ಯುವಕ ಸಂಘದ ಅಧ್ಯಕ್ಷ ಎಂ.ಪಿ. ಲಿಂಗರಾಜು ಕಾರ್ಯಕ್ರಮ ಉದ್ಘಾಟಿಸಿದರು. ಗೌಡಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಇಂದೂಧರ್ ಕೊರೊನ ವೈರಸ್ ಮತ್ತು ಆರೋಗ್ಯದ ಕುರಿತು ಮಾಹಿತಿ ನೀಡಿದರು.

ಕಾಲೇಜಿನ ಪ್ರಾಂಶುಪಾಲ ಸಚಿನ್‍ಕುಮಾರ್ ಮಾತನಾಡಿ, ವಿದ್ಯಾರ್ಥಿಗಳು ಸಂಯಮ ಮತ್ತು ಶಿಸ್ತು, ಸಮಯಪಾಲನೆ ಮೈಗೂಡಿಸಿಕೊಳ್ಳಬೇಕು ಎಂದರು.

ನೆಹರು ಯುವ ಕೇಂದ್ರದ ರಾಷ್ಟ್ರೀಯ ಯುವ ಕಾರ್ಯಕರ್ತರಾದ ಲಕ್ಷ್ಮೀಕಾಂತ್, ಸಂತೋಷ್‍ಕುಮಾರ್, ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಎಚ್. ಆರ್. ಸುರೇಶ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾಧಿಕಾರಿ ಪ್ರಕಾಶ್, ಪ್ರಮುಖರಾದ ಮಹೇಶ್, ಆದರ್ಶ್, ಎಂ.ಬಿ. ಹರೀಶ್, ಪ್ರವೀಣ್‍ಕುಮಾರ್, ಲಿಖಿತ್ ಮತ್ತಿತರರು ಉಪಸ್ಥಿತರಿದ್ದರು.