ಮಡಿಕೇರಿ, ಮಾ. 7: ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಪೋಷಣ್ ಅಭಿಯಾನ ಯೋಜನೆಯಡಿ ಪೋಷಣ್ ಪಾಕ್ಷಿಕ ಕಾರ್ಯಕ್ರಮವನ್ನು ತಾಲೂಕು ಮತ್ತು ಜಿಲ್ಲಾಮಟ್ಟದಲ್ಲಿ ಹಮ್ಮಿಕೊಳ್ಳಲಾಗಿದೆ.
ತಾ. 9 ರಂದು ಬೆಳಿಗ್ಗೆ 10 ಗಂಟೆಗೆ ಕಡಗದಾಳು ಸರ್ಕಾರಿ ಪ್ರಾಥಮಿಕ ಶಾಲೆ ಆವರಣದಲ್ಲಿ ತಾಲೂಕುಮಟ್ಟದ ಕಾರ್ಯಕ್ರಮ ಹಾಗೂ ತಾ. 10 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಡಿ. ದೇವರಾಜು ಅರಸು ಭವನದಲ್ಲಿ ಜಿಲ್ಲಾಮಟ್ಟದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದ ಅಂಗವಾಗಿ ಪೌಷ್ಟಿಕ ಆಹಾರ ಪ್ರದರ್ಶನ ಮತ್ತು ಮೇಳ ಹಮ್ಮಿಕೊಳ್ಳಲಾಗಿದೆ. ಪುರುಷರಿಗಾಗಿ ಸ್ಪರ್ಧಾ ಸ್ಥಳದಲ್ಲಿಯೇ ತಯಾರಿಸುವ ಒಲೆರಹಿತ ಅಡುಗೆ ಸ್ಪರ್ಧೆ ಆಯೋಜಿಸಲಾಗಿದೆ. ಆಸಕ್ತರು ತಮ್ಮ ಹೆಸರುಗಳನ್ನು ಸ್ಪರ್ಧಾ ಸ್ಥಳಗಳಲ್ಲಿ ನೋಂದಣಿ ಮಾಡಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ದೂ. 08272-298379 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು.