ಕೂಡಿಗೆ, ಮಾ. 7: ಇಲ್ಲಿಗೆ ಸಮೀಪದ ಯಡವನಾಡು ಸಮುದಾಯ ಭವನದಲ್ಲಿ ನಡೆದ ಐಗೂರು ಗ್ರಾಮ ಪಂಚಾಯಿತಿಯ ಗ್ರಾಮ ಸಭೆಯಲ್ಲಿ ಹಾಜರಿದ್ದ ಕೆಲವೇ ಅಧಿಕಾರಿಗಳು ಸರಿಯಾದ ಮಾಹಿತಿ ನೀಡದೆ; ಸಭೆಯನ್ನು ಮುಂದೂಡುವಂತೆ ಗ್ರಾಮಸ್ಥರು ಒತ್ತಾಯ ಮಾಡಿದರು.
ಮೊದಲಿಗೆ ಹಾಜರಿದ್ದ 4 ಇಲಾಖೆಗಳ ಅಧಿಕಾರಿಗಳು ಸಮರ್ಪಕವಾಗಿ ಗ್ರಾಮಸ್ಥರ ಪ್ರಶ್ನೆಗಳಿಗೆ ಉತ್ತರಿಸಲು ಸಾಧ್ಯವಾಗದ್ದಿದ್ದಾಗ ಗ್ರಾಮ ಪಂಚಾಯಿತಿ ಅಧ್ಯಕ್ಷ ಡಿ.ಎಂ. ರಮೇಶ್ ಅಧ್ಯಕ್ಷತೆಯಲ್ಲಿ ಪ್ರಾರಂಭವಾಯಿತು.
ಅರಣ್ಯ ಇಲಾಖೆಯ ಅಧಿಕಾರಿ ಸಭೆಯಲ್ಲಿ ಮಾತನಾಡಲು ಪ್ರಾರಂಬಿಸಿದಾಗ, ಈ ವ್ಯಾಪ್ತಿಯಲ್ಲಿ ಕಾಡಾನೆ ಹಾವಾಳಿ ಇರುವುದರಿಂದ ವಲಯ ಅರಣ್ಯ ಅಧಿಕಾರಿ ಬರಬೇಕು ಎಂದು ಗಾಮಸ್ಥರು ಪಟ್ಟು ಹಿಡಿದರು. ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಯ ಬದಲು ವಾರ್ಡನ್ ಮಾಹಿತಿ ನೀಡಲು ಬಂದಾಗ ಸಭೆಯಲ್ಲಿ ಗೊಂದಲ ಉಂಟಾಯಿತು. ವಿದ್ಯುತ್ ಇಲಾಖೆಯ ಅಧಿಕಾರಿಯ ಬದಲು ಲೈನ್‍ಮ್ಯಾನ್ ಮಾಹಿತಿ ನೀಡಲು ಬಂದಿದ್ದರು. ಇದರಿಂದ ಗ್ರಾಮ ಸಭೆಯನ್ನು ಮುಂದೂಡಲಾಯಿತು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯೆ ಪೂರ್ಣಿಮಾ, ತಾ.ಪಂ. ಸದಸ್ಯೆ ಸಬಿತಾ ಚೆನ್ನಕೇಶವ, ಸೇರಿದಂತೆ ಸದಸ್ಯರು ಹಾಜರಿದ್ದರು.