ಚೆಟ್ಟಳ್ಳಿ, ಮಾ. 8: ಭಾರತ ಸರ್ಕಾರ, ನೆಹರೂ ಯುವ ಕೇಂದ್ರ ಮತ್ತು ನೇತಾಜಿ ಗೆಳೆಯರ ಬಳಗ ಚೆಡಾವು ಸಂಪಾಜೆ ಸಂಯುಕ್ತ ಆಶ್ರಯದಲ್ಲಿ ಗಾಂಧೀಜಿಯವರ 150ನೇ ಜನ್ಮದಿನಾಚರಣೆಯ ಅಂಗವಾಗಿ ಜಲಸಂರಕ್ಷಣೆ ಮತ್ತು ಸ್ವಚ್ಛತಾ ಅಭಿಯಾನ ಹಾಗೂ ಶ್ರಮದಾನ ನಡೆಯಿತು.

ಸಂಪಾಜೆ ಪ್ರಾಥಮಿಕ ಆರೋಗ್ಯ ಕೇಂದ್ರದ ಸುತ್ತ ಮುತ್ತ ಸರಕಾರಿ ಮಾದರಿ ಪ್ರಾಥಮಿಕ ಶಾಲೆ ಸಂಪಾಜೆಯಲ್ಲಿ ಸ್ವಚ್ಛತಾ ಶ್ರಮದಾನ, ಚಡಾವು ರಸ್ತೆ ಸ್ವಚ್ಛತೆ ಹಾಗೂ ಪಯಸ್ವಿನಿ ನದಿಯಲ್ಲಿರುವ ಪ್ಲಾಸ್ಟಿಕ್, ಬಟ್ಟೆ ಇನ್ನಿತರ ವಸ್ತುಗಳನ್ನು ತೆಗೆದು ಸ್ವಚ್ಛಗೊಳಿಸಲಾಯಿತು.

ಈ ಕಾರ್ಯಕ್ರಮದಲ್ಲಿ ನೇತಾಜಿ ಗೆಳೆಯರ ಬಳಗದ ಅಧ್ಯಕ್ಷ ಶಶಿಕುಮಾರ್ ಹೆಚ್.ಬಿ., ಉಪಾಧ್ಯಕ್ಷ ನಾಗೇಶ್ ಹೆಚ್.ಎನ್., ಕಾರ್ಯದರ್ಶಿ ಸುಂದರ ಹೆಚ್.ಬಿ., ಖಜಾಂಚಿ ನಾರಾಯಣ ಹೆಚ್.ಸಿ. ಹಾಗೂ ಸಂಪಾಜೆ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತಾಧಿಕಾರಿ ಮಲ್ಲಿಕಾರ್ಜುನ ಪಿ., ಸಂತೋಷ್, ತೀರ್ಥರಾಮ, ಸಚಿನ್, ಅಶ್ವಥ್, ಗಣೇಶ್, ಚಂದ್ರಶೇಖರ, ವಸಂತ, ನೆಹರೂ ಯುವ ಕೇಂದ್ರದ ರಾಷ್ಟ್ರೀಯ ಯುವ ಕಾರ್ಯಕರ್ತ ಸಂತೋಷ್ ಕುಮಾರ್, ಮತ್ತಿತರರು ಹಾಜರಿದ್ದರು.