ಮಡಿಕೇರಿ, ಮಾ. 7: ಟ್ವಿಟರ್, ಫೇಸ್‍ಬುಕ್, ವಾಟ್ಸ್‍ಆ್ಯಪ್, ಟೆಲಿಗ್ರಾಂ ಮುಂತಾದ ಸಾಮಾಜಿಕ ಜಾಲತಾಣಗಳ ಮುಖಾಂತರ; ಸಾರ್ವಜನಿಕರು ವಿವಿಧ ಸಮಸ್ಯೆಗಳು ಮತ್ತು ಕುಂದುಕೊರತೆಯೊಂದಿಗೆ ತಮ್ಮ ನ್ಯಾಯಯುತ ಬೇಡಿಕೆಗಳ ಬಗ್ಗೆ ಸರಕಾರದ ಗಮನ ಸೆಳೆಯಲು ಜನಸ್ನೇಹಿ ಕಾರ್ಯಕ್ರಮ ರೂಪಿಸಲಾಗಿದೆ.ಕಳೆದ ಫೆಬ್ರವರಿ 4 ರಂದು ‘ಜನಸ್ನೇಹಿ ಆಡಳಿತ ನಮ್ಮ ಸಂಕಲ್ಪ’ ಕಾರ್ಯಕ್ರಮಕ್ಕೆ ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಚಾಲನೆ ನೀಡುವದರೊಂದಿಗೆ; ಸಾಮಾಜಿಕ ಜಾಲ ತಾಣಗಳ ಮುಖಾಂತರ ಸಾರ್ವಜನಿಕರು ನೇರವಾಗಿ ತಮ್ಮ ಸಮಸ್ಯೆಗಳನ್ನು ಗಮನಕ್ಕೆ ತರುವಂತೆ ಕರೆ ನೀಡಿದ್ದಾರೆ. ಆ ದಿಸೆಯಲ್ಲಿ ಕರ್ನಾಟಕ ವಾರ್ತಾ ಮತ್ತು ಪ್ರಸಾರ ಇಲಾಖೆ ಹಾಗೂ ಕಾರ್ಮಿಕ ಇಲಾಖೆಗಳ ಸಹಯೋಗದಲ್ಲಿ ಈ ಜನಸ್ನೇಹಿ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಗಮನ ಹರಿಸಲಾಗಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಜನಸ್ನೇಹಿ ಸಹಾಯ ವೇದಿಕೆಯ ಸಂಪರ್ಕ ಸಂಖ್ಯೆ 9980299802ಗೆ ವಾಟ್ಸ್‍ಆ್ಯಪ್; @ಞಚಿಡಿಟಿಚಿಣಚಿಞಚಿ-ಜiಠಿಡಿ ಅಥವಾ ಕಾರ್ಮಿಕ ಸಹಾಯವಾಣಿ 155214 ಹಾಗೂ 9333333684 ವಾಟ್ಸ್‍ಆ್ಯಪ್ ಮೂಲಕ ಸಂಪರ್ಕಿಸಲು ವೇದಿಕೆ ಕಲ್ಪಿಸಲಾಗಿದೆ. ಈ ಮುಖಾಂತರ ರಾಜ್ಯದ ಮುಖ್ಯಮಂತ್ರಿಗಳು ಸೇರಿದಂತೆ ಸಾರ್ವಜನಿಕ ದೂರುಗಳನ್ನು ಅಥವಾ ಬೇಕು ಬೇಡಿಕೆಗಳನ್ನು ಆಯಾ ಇಲಾಖೆಗಳಿಗೆ ತಲಪಿಸುವ ಕೆಲಸವನ್ನು ವಾರ್ತಾ ಇಲಾಖೆ ಮಾಡಲಿದೆ. ಬಳಿಕ ಸಂಬಂಧಿಸಿದವರು ಸಾರ್ವಜನಿಕರಿಗೆ ಅಗತ್ಯ ಮಾಹಿತಿ ಒದಗಿಸಲಿದ್ದು; ಆಯಾ ದೂರುಗಳ ಕುರಿತು ಈ ಜನಸ್ನೇಹಿ ಆಡಳಿತದಡಿಯಲ್ಲಿ ಗಮನ ಹರಿಸಲಿದೆ.