ಸೋಮವಾರಪೇಟೆ, ಮಾ. 7: ತಾಲೂಕಿನ ನೇರುಗಳಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸಳ್ಳಿ ಗ್ರಾಮದಲ್ಲಿ ತಾ. 11 ರಿಂದ 13 ರವರೆಗೆ ಶ್ರೀ ಬಸವೇಶ್ವರ, ಶ್ರೀ ಗಣಪತಿ ಹಾಗೂ ಶ್ರೀ ವನದುರ್ಗಾಪರಮೇಶ್ವರಿ ದೇವರುಗಳ ಪ್ರತಿಷ್ಠಾಪನೆ ಹಾಗೂ ನೂತನ ದೇವಾಲಯದ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ ಎಂದು ದೇವಾಲಯ ಸಮಿತಿ ಅಧ್ಯಕ್ಷ ಹೆಚ್.ಕೆ. ಲೋಕೇಶ್ ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಾ. 11 ರಂದು ಬೆಳಿಗ್ಗೆ 9 ರಿಂದ ವಿವಿಧ ಪೂಜಾ ಕೈಂಕರ್ಯಗಳು ನಡೆಯಲಿದ್ದು, ಸಂಜೆ 4.30ಕ್ಕೆ ಸರ್ವತೋಮಂಡಲ ರಚನೆ ನಿರೀಕ್ಷಣೆ, ಬ್ರಹ್ಮಕಲಶ ಸ್ಥಾಪನೆ, ಬಿಂಬಶುದ್ಧಿ ಮತ್ತಿತರ ಕಾರ್ಯ ಸ್ವತಂತ್ರ ಶ್ರೀ ಬಸವಲಿಂಗ ಸ್ವಾಮೀಜಿ ದಿವ್ಯ ಸಾನ್ನಿಧ್ಯ ವಹಿಸಲಿದ್ದಾರೆ. ಕಾರ್ಯಕ್ರಮವನ್ನು ಕಿರಿಕೊಡ್ಲಿ ಮಠದ ಶ್ರೀ ಸದಾಶಿವ ಸ್ವಾಮೀಜಿ ಉದ್ಘಾಟಿಸ ಲಿದ್ದು, ಮುಖ್ಯ ಅತಿಥಿಗಳಾಗಿ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್, ಮಾಜಿ ಸಚಿವ ಬಿ.ಎ. ಜೀವಿಜಯ, ಜಿ.ಪಂ. ಸದಸ್ಯರಾದ ಪೂರ್ಣಿಮಾ ಗೋಪಾಲ್, ತಾ.ಪಂ. ಸದಸ್ಯೆ ಸವಿತಾ ಈರಪ್ಪ, ಗ್ರಾಮ ಪಂಚಾಯಿತಿ ಅಧ್ಯಕ್ಷ ಎ.ಹೆಚ್. ತಿಮ್ಮಯ್ಯ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.

ಗೋಷ್ಠಿಯಲ್ಲಿ ದೇವಾಲಯ ಸಮಿತಿಯ ಪದಾಧಿಕಾರಿಗಳಾದ ಕೆ.ಕೆ. ಪೊನ್ನಪ್ಪ, ವೈ.ಪಿ. ಬೋಜೇಗೌಡ, ಹೆಚ್.ಕೆ. ವಿನೋದ್‍ಕುಮಾರ್, ಹೆಚ್.ಜಿ. ಕೃಷ್ಣಪ್ಪ, ಸಿ.ಎನ್. ಸತೀಶ್ ಉಪಸ್ಥಿತರಿದ್ದರು.