ಮಡಿಕೇರಿ, ಮಾ. 10: ಕರ್ನಾಟಕ ರಾಜ್ಯ ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಕೊಡಮಾಡುವ ಪ್ರತಿಷ್ಠಿತ ಅನುಪಮಾ ಸೇವಾ ಪ್ರಶಸ್ತಿಗೆ ಭಾಜನರಾದ 7ನೇ ಹೊಸಕೋಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಬಿ.ಕೆ. ಲೀಲಾವತಿ ಅವರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಆರ್ ಜೊಲ್ಲೆ ಅವರಿಂದ ಪ್ರಶಸ್ತಿ ಸ್ವೀಕರಿಸಿದರು. ಬೆಂಗಳೂರಿನ ಮಲ್ಲೇಶ್ವರದ ವಯ್ಯಾಲಿ ಕಾವಲ್‍ನಲ್ಲಿರುವ ಚೌಡಯ್ಯ ಸ್ಮಾರಕ ಭವನದಲ್ಲಿ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು

ಲೀಲಾವತಿ ಅವರು ಜಿಲ್ಲೆಯ ಪೆರಾಜೆ ಗ್ರಾಮ ನಿವಾಸಿ, ನಿವೃತ್ತ ಮುಖ್ಯೋಪಾಧ್ಯಾಯ ಮಜಿಕೋಡಿ ತಿಮ್ಮಪ್ಪ ಅವರ ಪತ್ನಿ.