ಮಡಿಕೇರಿ, ಮಾ. 10: ಗೋಣಿಕೊಪ್ಪಲು ಐಸಿಎಆರ್ ಕೃಷಿ ವಿಜ್ಞಾನ ಕೇಂದ್ರ, ಕೃಷಿ, ತೋಟಗಾರಿಕೆ, ಪಶು ಪಾಲನೆ ಮತ್ತು ಪಶು ವೈದ್ಯ ಸೇವೆ, ಮೀನುಗಾರಿಕೆ ಹಾಗೂ ಅರಣ್ಯ ಇಲಾಖೆ ಇವರ ಸಹಯೋಗದಲ್ಲಿ ‘ಆತ್ಮ ಯೋಜನೆ’ಯಡಿಯಲ್ಲಿ ಎರಡು ದಿನದ ಕಿಸಾನ್ ಮೇಳ ಮತ್ತು ಪೆÇನ್ನಂಪೇಟೆ ಹೋಬಳಿ ಮಟ್ಟದ ಕೃಷಿ ಅಭಿಯಾನ ಕಾರ್ಯಕ್ರಮವು ತಾ. 11 ರಂದು (ಇಂದು) ಮತ್ತು 12 ರಂದು ಗೋಣಿಕೊಪ್ಪ ಅತ್ತೂರಿನ ಕೃಷಿ ವಿಜ್ಞಾನ ಕೇಂದ್ರದಲ್ಲಿ ನಡೆಯಲಿದೆ.
ತಾ. 12 ರಂದು ಮಧ್ಯಾಹ್ನ 2 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ. ಕಿಸಾನ್ ಮೇಳದಲ್ಲಿ ತಾ. 11 ರಂದು (ಇಂದು) ಬೆಳಿಗ್ಗೆ 11.30 ಗಂಟೆಗೆ ಕಾಫಿ, ಕಾಳುಮೆಣಸು, ಶುಂಠಿಯ ನೂತನ ತಾಂತ್ರಿಕತೆಗಳು ಮತ್ತು ತಾ. 12 ರಂದು ಬೆಳಿಗ್ಗೆ 10.30 ಗಂಟೆಗೆ ಸಮಗ್ರ ಕೃಷಿ ಪದ್ಧತಿಗಳ ಕುರಿತು ವಿಜ್ಞಾನಿಗಳಿಂದ ವಿಚಾರ ಸಂಕಿರಣ ನಡೆಯಲಿದೆ.
ಸುಮಾರು 20 ವಿವಿಧ ವಸ್ತು ಪ್ರದರ್ಶನಗಳನ್ನು ಆಯೋಜಿಸಲಾಗಿದೆ. ಆಸಕ್ತ ಜಿಲ್ಲೆಯ ರೈತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾಹಿತಿ ಪಡೆದುಕೊಳ್ಳುವಂತೆ ಗೋಣಿಕೊಪ್ಪಲು ಕೃಷಿ ವಿಜ್ಞಾನ ಕೇಂದ್ರದ ಪ್ರಧಾನ ವಿಜ್ಞಾನಿಗಳು ಮತ್ತು ಮುಖ್ಯಸ್ಥರು ಹಾಗೂ ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕರು ಮನವಿ ಮಾಡಿದ್ದಾರೆ. ಹೆಚ್ಚಿನ ಮಾಹಿತಿಗೆ ಪ್ರಧಾನ ವಿಜ್ಞಾನಿಗಳು ಮತ್ತು ಮುಖ್ಯಸ್ಥರು, ಐ.ಸಿ.ಎ.ಆರ್-ಕೃಷಿ ವಿಜ್ಞಾನ ಕೇಂದ್ರ, ಗೋಣಿಕೊಪ್ಪಲು, ಕೊಡಗು ಜಿಲ್ಲೆ, ದೂರವಾಣಿ: 08274-247274 ನ್ನು ಸಂಪರ್ಕಿಸಬಹುದು.