ಸಿದ್ದಾಪುರ, ಮಾ. 10: ಓಡಿಪಿ ಸಂಸ್ಥೆ ಹಾಗೂ ಕಾರಿತಸ್ ಇಂಡಿಯಾ ಅಪೋಲೋ ಬಿಜಿಎಸ್ ಆಸ್ಪತ್ರೆ ಮೈಸೂರು ಗ್ರಾಮ ಪಂಚಾಯಿತಿ ಮಾಲ್ದಾರೆ, ಸಮುದಾಯ ಆರೋಗ್ಯ ಕೇಂದ್ರ ಮಾಲ್ದಾರೆ ಇವರುಗಳ ಸಂಯುಕ್ತ ಆಶ್ರಯದಲ್ಲಿ ಮಾಲ್ದಾರೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಮಾತನಾಡಿದ ಮೈಸೂರು ಅಪೋಲೋ ಆಸ್ಪತ್ರೆ ವೈದ್ಯಾಧಿಕಾರಿ ಡಾಕ್ಟರ್ ಸಚಿನ್ ಆರೋಗ್ಯದ ಬಗ್ಗೆ ಎಚ್ಚರ ವಹಿಸಬೇಕೆಂದು ಕರೆ ನೀಡಿದರು ಸಾರ್ವಜನಿಕರು ಉಚಿತ ಆರೋಗ್ಯ ಶಿಬಿರದಲ್ಲಿ ಭಾಗವಹಿಸಿ ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯೆ ಲೀಲಾವತಿ, ಮೈಸೂರು ಅಪೋಲೋ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಭಾರತಿ, ಸಂಯೋಜಕ ಡಾ. ಆನಂದ್, ಮಾಲ್ದಾರೆ ಸಮುದಾಯ ಆರೋಗ್ಯ ಕೇಂದ್ರದ ಡಾ. ಶೃಂಗ, ಓಡಿಪಿ ಸಂಸ್ಥೆ ಜಿಲ್ಲಾ ಸಂಚಾಲಕಿ ಜಾಯ್ಸ್ ಮೆನೇಜಸ್, ಸದಸ್ಯ ವಿಜಯ ನಾರಾಯಣ ಮಾಲ್ದಾರೆ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ರಾಣಿ, ಸದಸ್ಯ ಸತೀಶ್ ಪಿಡಿಓ ರಾಜೇಶ್ ಇನ್ನಿತರರು ಹಾಜರಿದ್ದರು. ಶಿಬಿರದಲ್ಲಿ 150ಕ್ಕೂ ಅಧಿಕ ಮಂದಿ ಭಾಗವಹಿಸಿದ್ದರು.