ಕೂಡಿಗೆ, ಮಾ. 10: ಕೂಡಿಗೆ ಗ್ರಾಮ ಪಂಚಾಯಿತಿ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಭೆಯು ಕೂಡಿಗೆ ಸಭಾಂಗಣದಲ್ಲಿ ಕಾಂಗ್ರೆಸ್ ಪಕ್ಷವನ್ನು ಬೂತ್ ಮಟ್ಟದಿಂದಲೇ ಬಲವರ್ಧನೆಗೊಳಿಸುವ ಮೂಲಕ ಗ್ರಾಮ ಪಂಚಾಯತಿ ಆಡಳಿತವನ್ನು ತಮ್ಮ ತೆಕ್ಕೆಗೆ ತೆಗೆದುಕೊಡಲು ಕಾರ್ಯಕರ್ತರು ಶ್ರಮಿಸಬೇಕು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಕೆ. ಮಂಜುನಾಥ್ ಕುಮಾರ್ ಹೇಳಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅನಂತ್ ಕುಮಾರ್ ಮಾತನಾಡಿ, ಕಾಂಗ್ರೆಸ್ ಸರ್ಕಾರ ಜಾರಿಗೆ ತಂದ ಜನಪರ ಕಾರ್ಯಕ್ರಮಗಳ ಕುರಿತು ಜಾಗೃತಿ ಮೂಡಿಸುವ ಕೆಲಸವನ್ನು ಕಾರ್ಯಕರ್ತರು ಮಾಡಬೇಕು ಎಂದರು. ಕಾಂಗ್ರೆಸ್ ವಕ್ತಾರ ಟಿ.ಈ. ಸುರೇಶ್ ಮಾತನಾಡಿ, ಪಕ್ಷದ ಕಾರ್ಯಕರ್ತರು ತಮ್ಮ ಭಿನ್ನಾಭಿಪ್ರಾಯ ವನ್ನು ಬದಿಗಿಟ್ಟು ಪಕ್ಷ ಸಂಘಟನೆ ಯಲ್ಲಿ ತೊಡಗಿಸಿಕೊಳ್ಳಬೇಕು ಎಂದರು. ವಲಯ ಕಾಂಗ್ರೆಸ್ ಅಧ್ಯಕ್ಷ ಟಿ.ಪಿ. ಹಮೀದ್ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭ ರಾಜೀವ್‍ಗಾಂಧಿ ಬ್ರಿಗೇಡ್ ಜಿಲ್ಲಾ ಸಂಚಾಲಕ ತೆನ್ನಿರಾ ಮೈನಾ, ರಾಜ್ಯ ಕಾಂಗ್ರೆಸ್ ಸಮಿತಿಯ ಕಾರ್ಮಿಕ ವಿಭಾಗದ ಪ್ರಧಾನ ಕಾರ್ಯದರ್ಶಿ ಅಜ್ಜಳ್ಳಿ ರವಿ, ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹೂವಯ್ಯ, ತ್ರಿನೇಶ್, ಗ್ರಾಮ ಪಂಚಾಯಿತಿ ಸದಸ್ಯ ಪುಷ್ಪಾ, ಬೂತ್ ಸಮಿತಿ ಅಧ್ಯಕ್ಷ ಕೃಷ್ಣ, ಮುಖಂಡರಾದ ಮಂಜು, ಮಲ್ಲೇಶ್, ರಜಾಕ್ ಉಪಸ್ಥಿತರಿದ್ದರು.